ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪ.ಬಂಗಾಳ: ಪೆಟ್ರೋಲ್ ಸುರಿದು 3 ಪತ್ರಕರ್ತರ ಹತ್ಯೆಗೆ ಯತ್ನ

ಪ.ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರು ಮೂವರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿ, ಅವರ ಮೇಲೆ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನಿಸಿದ್ದಾರೆ.

Srinivasa Murthy VN
Updated On : 7 Jun 2013, 6:31 am

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಪತ್ರಕರ್ತರ ಮೇಲೆ ರಾಜಕೀಯ ಪಕ್ಷವೊಂದರ ಕಾರ್ಯಕರ್ತರು ಗಂಭೀರವಾಗಿ ಹಲ್ಲೆ ನಡೆಸಿದ್ದಲ್ಲದೆ, ಮೂವರು ಪತ್ರಕರ್ತರ ಮೇಲೆ ಪೆಟ್ರೋಲ್ ಸುರಿದು ಹತ್ಯೆ ಮಾಡಲು ಯತ್ನಿಸಿದ್ದಾರೆ.

ಪಶ್ಚಿಮಬಂಗಾಳದ ಭಾರಕ್ಪುರದಲ್ಲಿ ಸುದ್ದಿಗಾರರು ಮತ್ತು ಖಾಸಗಿ ವಾಹಿನಿಗಳ ಕ್ಯಾಮೆರಾಮನ್ಗಳ ಮೇಲೆ ಪೆಟ್ರೋಲ್ ಸುರಿದು ಹತ್ಯೆ ಮಾಡಲು ಪ್ರಯತ್ನಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಮೂವರು ಪತ್ರಕರ್ತರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ನಡೆಸಿದವರನ್ನು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೆಂದು ಹೇಳಲಾಗುತ್ತಿದ್ದು, ನೂರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಏಕಾಏಕಿ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement