ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಜೆಪಿ ಕಾರ್ಯಕಾರಣಿಗೆ ಆಡ್ವಾಣಿ ಗೈರು

ಗೋವಾದಲ್ಲಿ ಇಂದಿನಿಂದ ಆರಂಭವಾಗಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಪಕ್ಷದ ಹಿರಿಯ..

Lingaraj Badiger
Updated On : 7 Jun 2013, 2:26 am

ನವದೆಹಲಿ: ಗೋವಾದಲ್ಲಿ ಇಂದಿನಿಂದ ಆರಂಭವಾಗಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಪಕ್ಷದ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಹಾಗೂ ಉಮಾ ಭಾರತಿ ಅವರು ಗೈರು ಆಗಿದ್ದಾರೆ.

85 ವರ್ಷದ ಹಿರಿಯ ನಾಯಕ ಆಡ್ವಾಣಿ ಅವರು ಆನಾರೋಗ್ಯದ ಕಾರಣ ನೀಡಿ ಇಂದಿನ ಸಭೆಗೆ ಗೈರು ಆಗಿದ್ದಾರೆ. ಆದರೆ ಅವರು ಶನಿವಾರ ಹಾಗೂ ಭಾನುವಾರ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಮಧ್ಯೆ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಗೋವಾ ಕಾರ್ಯಕಾರಣಿಯಲ್ಲಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಇದಕ್ಕೆ ಕಾರಣ ಪಕ್ಷದಲ್ಲಿನ ಭಿನ್ನಾಭಿಪ್ರಾಯ ಹಾಗೂ ಆಡ್ವಾಣಿ ನೇತೃತ್ವದಲ್ಲೇ ಮೋದಿಗೆ ಸ್ಥಾನಮಾನ ಘೋಷಣೆ ಮಾಡುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗಿದೆ ಎನ್ನಲಾಗುತ್ತಿದೆ.

ಆದರೆ ಮೂಲಗಳ ಪ್ರಕಾರ, ಕಾರ್ಯಕಾರಣಿಯಲ್ಲಿ ಮೋದಿಗೆ ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ. ಆಡ್ವಾಣಿ, ಸುಷ್ಮಾ ಸ್ವರಾಜ್ ಹಾಗೂ ಅನಂತ್ ಕುಮಾರ್ ಸೇರಿದಂತೆ ಪಕ್ಷದ ಹಲವು ಹಿರಿಯ ನಾಯಕರ ವಿರೋಧದ ನಡುವೆಯೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಇಂಥಹ ನಿರ್ಧಾರಕ್ಕೆ ಮುಂದಾಗಲಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement