ಮಂಡೇಲಾ ಮತ್ತೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ದಕ್ಷಿಣ ಆಫ್ರಿಕಾ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಶನಿವಾರ ಆಸ್ಪತ್ರೆಗೆ ದಾಖಲಿಸ..
ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಏಳು ತಿಂಗಳಲ್ಲಿ ಮೂರನೇ ಬಾರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ನೋಬೆಲ್ ಪ್ರಶಸ್ತಿ ವಿಜೇತ, 94 ವರ್ಷದ ಮಂಡೇಲಾ ಅವರು ಕಳೆದ ಏಪ್ರಿಲ್ 16ರಂದು ಪ್ರಿಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಯಲ್ಲಿಯೇ ಚೇತರಿಸಿಕೊಳ್ಳುತ್ತಿದ್ದರು. ಆದರೆ ಇದೀಗ ಅವರ ಆರೋಗ್ಯ ಮತ್ತಷ್ಟು ಬಿಗುಡಾಯಿಸಿದ್ದು, ಇಂದು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ಉಸಿರಾಟದ ತೊಂದರೆ ಎದುರಿಸುತ್ತಿದ್ದ ಅವರನ್ನು ಇಂದು ಮಧ್ಯಾಹ್ನ 1.30ರ ಸುಮಾರಿಗೆ ಪ್ರಿಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದಕ್ಷಿಣ ಆಫ್ರಿಕಾ ಅಧ್ಯಕ್ಷ ಜಾಕೋಬ್ ಜುಮಾ ಅವರ ವಕ್ತಾರ ಮ್ಯಾಕ್ ಮಹರಾಜ್ ಅವರು ತಿಳಿಸಿದ್ದಾರೆ.
ಆಸ್ಪತ್ರೆಗೆ ದಾಖಲಾಗಿರುವ ಮಂಡೇಲಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ. ಆದರೂ ಅರೋಗ್ಯ ಸ್ಥಿರವಾಗಿದೆ ಎಂದು ಮಹರಾಜ್ ಹೇಳಿದ್ದಾರೆ.