ಮೋದಿಗೆ ಬಿಎಸ್‌ವೈ ಅಭಿನಂದನೆ
ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಿರುವುದು ತಡವಾದರು ಬಿಜೆಪಿ ಉತ್ತಮ ನಿರ್ಧಾರ ಕೈಗೊಂಡಿದೆ ಎಂದು...
ಬೆಂಗಳೂರು: ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಿರುವುದು ತಡವಾದರು ಬಿಜೆಪಿ ಉತ್ತಮ ನಿರ್ಧಾರ ಕೈಗೊಂಡಿದೆ ಎಂದು ಕರ್ನಾಟಕ ಜನತಾ ಪಕ್ಷದ(ಕೆಜೆಪಿ) ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ.
ಪಣಜಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮೋದಿಗೆ ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ಘೋಷಣೆಯಾಗುತ್ತಿದಂತೆ, ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ ಅವರು ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮೋದಿ ಅವರಿಗೆ ಈ ಸ್ಥಾನಕ್ಕೆ ತಕ್ಕ ಹಾಗೂ ಯೋಗ್ಯ ವ್ಯಕ್ತಿಯಾಗಿದ್ದು. ತಡವಾದರು ಬಿಜೆಪಿ ಉತ್ತಮ ನಿರ್ಧಾರ ಕೈಗೊಂಡಿದೆ. ಮೋದಿ ಅವರು ತಮಗೆ ನೀಡಿರುವ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಲ್ಲಿದ್ದಾರೆ. ಮೋದಿ ಅವರು ಕೈಗೊಳ್ಳುವ ಕಾರ್ಯಗಳು ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.