ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಐಪಿಎಲ್‌ನಿಂದ ರಾಜ್ ಕುಂದ್ರಾ ಅಮಾನತು

ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ನಡೆಸಿದ ಆರೋಪದ ಮೇಲೆ ರಾಜಸ್ಥಾನ ರಾಯಲ್ಸ್ ತಂಡದ ಸಹ ಮಾಲೀಕ ರಾಜ್ ಕುಂದ್ರಾ...

Lingaraj Badiger
Updated On : 10 Jun 2013, 5:02 am

ನವದೆಹಲಿ: ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ನಡೆಸಿದ ಆರೋಪ ಎದುರಿಸುತ್ತಿರುವ ರಾಜಸ್ಥಾನ ರಾಯಲ್ಸ್ ತಂಡದ ಸಹ ಮಾಲೀಕ ರಾಜ್ ಕುಂದ್ರಾ ಅವರನ್ನು ಸೋಮವಾರ ಐಪಿಎಲ್‌ನಿಂದ ಅಮಾನತುಗೊಳಿಸಲಾಗಿದೆ.

ಇಂದು ದೆಹಲಿಯಲ್ಲಿ ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಂದ್ರಾ ಅವರನ್ನು ಅಮಾನತುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಈ ಮೂಲಕ 'ಬಾಜಿ ಕಟ್ಟುವವರಿಗೆ ಬಿಸಿಸಿಐ ಬಿಸಿ ಮುಟ್ಟಿಸಿದೆ'

ಆದರೆ ಬಿಸಿಸಿಐನ ಈ ನಿರ್ಧಾರಕ್ಕೆ ಕೆಲವು ಕ್ರಿಕೆಟ್ ತಜ್ಞರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇದೊಂದು ಕಣ್ಣೋರೆಸುವ ತಂತ್ರ ಅಷ್ಟೇ. ಬೆಟ್ಟಿಂಗ್ ವಿರುದ್ಧ ಬಿಸಿಸಿಐ ಕಠಿಣ ನಿರ್ಧಾರ ತೆಗೆದುಕೊಳ್ಳುವುದೇ ಆದರೆ ರಾಜಸ್ಥಾನ ರಾಯಲ್ಸ್ ತಂಡವನ್ನೇ ಐಪಿಎಲ್‌ನಿಂದ ರದ್ದುಗೊಳಿಸಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣ ಸಂಬಂಧ ಕುಂದ್ರಾ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಕುಂದ್ರಾ ಅವರು ತಾವು ಬೆಟ್ಟಿಂಗ್ ನಡೆಸಿರುವುದಾಗಿ ಮತ್ತು ಅದರಿಂದ ಕೋಟ್ಯಾಂತರ ರುಪಾಯಿ ಕಳೆದುಕೊಂಡಿರುವುದಾಗಿ ತಪ್ಪೊಪ್ಪಿಕೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement