ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಹೈ-ಕ: ಕಲಂ 370ರ ಜಾರಿಗೆ ಸಮಿತಿ ರಚನೆ

ಹೈದರಾಬಾದ್-ಕರ್ನಾಟಕ ಭಾಗದ ಅಭಿವೃದ್ಧಿಗೆ ಕೇಂದ್ರಸರ್ಕಾರ ತಿದ್ದುಪಡಿ ಮಾಡಿದ್ದ ಕಲಂ 370ರ ಜಾರಿಗಾಗಿ ರಾಜ್ಯ ಸರ್ಕಾರ...

Srinivasa Murthy VN
Updated On : 10 Jun 2013, 6:09 am

ಬೆಂಗಳೂರು: ಹೈದರಾಬಾದ್-ಕರ್ನಾಟಕ ಭಾಗದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದ ಕಲಂ 370ರ ಜಾರಿಗಾಗಿ ರಾಜ್ಯ ಸರ್ಕಾರ ಸಚಿವ ಸಂಪುಟ ಉಪ ಸಮಿತಿಯನ್ನು ರಚನೆ ಮಾಡಿದೆ.

ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಕಳೆದ ವರ್ಷ ಕೇಂದ್ರದ ಯುಪಿಎ ಸರ್ಕಾರ ಜಾರಿಗೊಳಿಸಿದ್ದ ಕಲಂ 370 ಅನ್ನು ರಾಜ್ಯದಲ್ಲಿ ಜಾರಿಗೊಳಿಸುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಇದಕ್ಕಾಗಿ ಸಂಪುಟ ಉಪ ಸಮಿತಿಯೊಂದನ್ನು ರಚಿಸಿದೆ. ಸಮಿತಿಯ ಅಧ್ಯಕ್ಷರಾಗಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಹೆಚ್.ಕೆ. ಪಾಟೀಲ್ ಅವರು ಆಯ್ಕೆಯಾಗಿದ್ದು, ಸಚಿವರಾದ ಖಮರುಲ್ ಇಸ್ಲಾಂ, ಶಿವರಾಜ್ ತಂಗಡಗಿ, ಶರಣ ಪ್ರಕಾಶ್ ಪಾಟೀಲ್, ಉಮಾಶ್ರೀ, ಪರಮೇಶ್ವರ ನಾಯಕ್, ಟಿ.ಬಿ ಜಯಂಚಂದ್ರ ಮತ್ತು ಚಿಂಚನಸೂರ ಅವರು ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಉಪ ಸಮಿತಿಯನ್ನು ರಚನೆ ಮಾಡಲಾಗಿದೆ. ಹೈ-ಕ ಭಾಗದ ಜನರ ಬಹು ವರ್ಷಗಳ ಕನಸು ಸಾಕಾರಗೊಳ್ಳಲು ಕಲಂ 370 ಸಹಾಯಕವಾಗಲಿದ್ದು, ಎಲ್ಲ ರೀತಿಯ ಸರ್ಕಾರಿ ಯೋಜನೆಗಳಲ್ಲಿ ಹೈದರಾಬಾದ್-ಕರ್ನಾಟಕ ಭಾಗದ ಜನರಿಗೆ ವಿಶೇಷ ಮೀಸಲಾತಿ ದೊರೆಯಲಿದೆ.

ಪೊಲೀಸ್ ವಿಧೇಯಕ ಅಂಗೀಕಾರ

ಇದೇ ವೇಳೆ ಕಲಾಪದಲ್ಲಿ ಪೊಲೀಸ್ ವಿಧೇಯಕಕ್ಕೆ ರಾಜ್ಯಸರ್ಕಾರ ವಿಧಾನಸಭೆಯ ಅನುಮೋದನೆ ಪಡೆದಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸರ್ಕಾರ ವಿಧಾನಸಭೆಯ ಅನುಮೋದನೆ ಪಡೆದುಕೊಂಡಿದೆ. ಈ ವಿಧೇಯಕದ ಮೂಲಕ ರಾಜ್ಯಸರ್ಕಾರಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ವಿಶೇಷ ಅಧಿಕಾರ ಲಭಿಸಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement