ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೇಂದ್ರ ಮಾಜಿ ಸಚಿವ ವಿ.ಸಿ.ಶುಕ್ಲಾ ನಿಧನ

ನಕ್ಸಲ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರ ಮಾಜಿ ಸಚಿವ ವಿ.ಸಿ.ಶುಕ್ಲಾ ಅವರು ..

Lingaraj Badiger
Updated On : 11 Jun 2013, 4:47 am

ಛತ್ತೀಸ್‌ಗಢ: ನಕ್ಸಲ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರ ಮಾಜಿ ಸಚಿವ ವಿ.ಸಿ.ಶುಕ್ಲಾ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.

ಮೇ 25ರಂದು ಛತ್ತೀಸ್‌ಗಢದ ಬಸ್ತಾರ್‌ನಲ್ಲಿ ಕಾಂಗ್ರೆಸ್ ಪರಿವರ್ತನಾ ರ್ಯಾಲಿ ವೇಳೆ ನಡೆದ ನಕ್ಸಲ್ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ 84 ವರ್ಷದ ವಿ.ಸಿ.ಶುಕ್ಲಾ ಅವರನ್ನು ಗುರಗಾಂವ್ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಳಿಯಲ್ಲಿ ಶುಕ್ಲಾ ಅವರ ದೇಹದೊಳಕ್ಕೆ ಮೂರು ಗುಂಡುಗಳು ಹೊಕ್ಕಿದ್ದವು.

ಈ ದಾಳಿಯಲ್ಲಿ ಛತ್ತೀಸ್‌ಗಢ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ನಂದಕುಮಾರ್ ಪಟೇಲ್ ಹಾಗೂ ಅವರ ಪುತ್ರ ದಿನೇಶ್ ಮತ್ತು ಕಾಂಗ್ರೆಸ್‌ನ ಹಿರಿಯ ನಾಯಕ ಮಹೇಂದ್ರ ಕರ್ಮಾ ಸೇರಿದಂತೆ 27 ಮಂದಿ ಮೃತಪಟ್ಟಿದ್ದರು.

ಶುಕ್ಲಾ ಅವರ ತಂದೆ ರವಿಶಂಕರ್ ಶುಕ್ಲಾ ಅವರು ಮಧ್ಯಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿದ್ದರು. ಇನ್ನು ವಿ.ಸಿ.ಶುಕ್ಲಾ ಅವರು 1966ರಲ್ಲಿ ಇಂದಿರಾ ಗಾಂಧಿ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಅವರ ಹಿರಿಯ ಸಹೋದರ ಎಸ್.ಸಿ. ಶುಕ್ಲಾ ಅವರು ಸಹ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಯಾಗಿದ್ದರು.

ಪ್ರಧಾನಿ ಸಂತಾಪ
ಕೇಂದ್ರದ ಮಾಜಿ ಸಚಿವ ವಿ.ಸಿ.ಶುಕ್ಲಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement