ಕೊಬ್ಬರಿಗೆ 6500 ರು. ಬೆಂಬಲ ಬೆಲೆ ಘೋಷಣೆ
ಸರ್ಕಾರ ಪ್ರತಿ ಕ್ವಿಂಟಲ್ ಕೊಬ್ಬರಿಗೆ 6500 ರುಪಾಯಿ ಬೆಂಬಲ ಬೆಲೆ ಘೋಷಿಸಿದ್ದು, ಈ ಸಂಬಂಧ ..
ಬೆಂಗಳೂರು: ಸರ್ಕಾರ ಪ್ರತಿ ಕ್ವಿಂಟಲ್ ಕೊಬ್ಬರಿಗೆ 6500 ರುಪಾಯಿ ಬೆಂಬಲ ಬೆಲೆ ಘೋಷಿಸಿದ್ದು, ಈ ಸಂಬಂಧ ಶೀಘ್ರದಲ್ಲೇ ಕೊಬ್ಬರಿ ಖರೀದಿ ಕೇಂದ್ರ ತೆರೆಯುವುದಾಗಿ ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ ಅವರು ಬುಧವಾರ ತಿಳಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಮಾತನಾಡಿದ ಸಚಿವ ಶಾಮನೂರು ಶಿವಶಂಕರಪ್ಪ, ಉಂಡೆ ಕೊಬ್ಬರಿಗೆ ರಾಜ್ಯ ಸರ್ಕಾರದಿಂದ 1 ಸಾವಿರ ಹಾಗೂ ಕೇಂದ್ರ ಸರ್ಕಾರದ 5500 ರುಪಾಯಿ ಸೇರಿ ಒಟ್ಟು 6500 ರುಪಾಯಿ ಬೆಂಬಲ ಬೆಲೆ ನೀಡಲಾಗುವುದು ಎಂದು ಹೇಳಿದರು.
ಸಹಕಾರ ಮಹಾಮಂಡಲಗಳ ಮೂಲಕ ತಕ್ಷಣದಿಂದಲೇ ಕೊಬ್ಬರಿ ಖರೀದಿ ಆರಂಭಿಸಲಾಗುವುದು ಮತ್ತು ಅಗತ್ಯವಿರುವ ಕಡೆ ಕೊಬ್ಬರಿ ಖರೀದಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಶಾಮನೂರು ವಿಧಾನಸಭೆಗೆ ತಿಳಿಸಿದರು.