ಹಲ್ಲೆ ಆರೋಪ; ಕ್ರಿಕೆಟಿಗ ಡೇವಿಡ್ ವಾರ್ನರ್ ಅಮಾನತು
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸಮನ್ ಡೇವಿಡ್ ವಾರ್ನರ್ ಅವರನ್ನು ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಕೆಟ್ ಆಸ್ಟ್ರೇಲಿಯಾ ಅಮಾನತು ಮಾಡಿದೆ.
ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸಮನ್ ಡೇವಿಡ್ ವಾರ್ನರ್ ಅವರನ್ನು ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಕೆಟ್ ಆಸ್ಟ್ರೇಲಿಯಾ ಅಮಾನತು ಮಾಡಿದೆ.
ಕುಡಿದ ಮತ್ತಿನಲ್ಲಿ ಇಂಗ್ಲೆಂಡ್ ತಂಡದ ಆಟಗಾರ ಜೋ ರೂಟ್ ಮೇಲೆ ಹಲ್ಲೆ ಮಾಡಿದ ಆರೋಪ ಸಂಬಂಧ ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆ (ಸಿಎ) ವಾರ್ನರ್ ಅವರನ್ನು ಅಮಾನತುಗೊಳಿಸಿದೆ. ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಸರಣಿಯಲ್ಲಿ ಪಾಲ್ಗೊಂಡಿರುವ ವಾರ್ನರ್ ಅವರನ್ನು ಈ ಕೂಡಲೇ ಜಾರಿಯಾಗುವಂತೆ ಅಮಾನತು ಮಾಡಲಾಗಿದೆ.
ಚಾಂಪಿಯನ್ಸ್ ಟ್ರೋಫಿಗೂ ಮೊದಲು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ ಸೋತಿತ್ತು. ಅಲ್ಲದೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಎಡ್ಜ್ಬಾಸ್ಟನ್ನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡ 48 ರನ್ಗಳಿಂದ ಸೋಲನ್ನು ಅನುಭವಿಸಿತ್ತು. ಸೋಲಿನ ನಂತರ ತೀವ್ರ ಬೇಸರಗೊಂಡಿದ್ದ ಡೇವಿಡ್ ವಾರ್ನರ್ ಮತ್ತು ತಂಡದ ಸಹ ಆಟಗಾರರು ಸ್ಥಳೀಯ ಬಾರ್ಗೆ ತೆರಳಿ ಮಧ್ಯಪಾನ ಮಾಡಿದ್ದರು. ಈ ವೇಳೆ ಅದೇ ಬಾರ್ಗೆ ಆಗಮಿಸಿದ್ದ ಇಂಗ್ಲೆಂಡ್ ತಂಡದ ಆಟಗಾರ ಜೋ ರೂಟ್ ಮೇಲೆ ವಾರ್ನರ್ ಮಾತಿನ ಚಕಮಕಿ ನಡೆಸಿ, ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಸ್ತುತ ವಾರ್ನರ್ ವಿರುದ್ಧ ಇಂಗ್ಲೆಂಡ್ ತಂಡದ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ವಾರ್ನರ್ ಇದೇ ಬುಧವಾರ ನ್ಯೂಜಿಲೆಂಡ್ ವಿರುದ್ಧ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.