ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಧಾರವಾಡ: ಹಳ್ಳಕ್ಕೆ ಉರುಳಿದ ಖಾಸಗಿ ಬಸ್, 5 ಸಾವು

ಮುಂಬೈನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ಸೊಂದು ಧಾರವಾಡ ಬಳಿಯ ಇಟ್ಟಗಟ್ಟಿ ಗ್ರಾಮದ ಬಳಿ..

Lingaraj Badiger
Updated On : 14 Jun 2013, 1:39 am

ಧಾರವಾಡ: ಮುಂಬೈನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ಸೊಂದು ಧಾರವಾಡ ಬಳಿಯ ಇಟ್ಟಗಟ್ಟಿ ಗ್ರಾಮದ ಬಳಿ ಕಂದಕಕ್ಕೆ ಉರುಳಿಬಿದ್ದಿದ್ದು, ಅಪಘಾತದಲ್ಲಿ ಐವರು ಪ್ರಾಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಇಂದು ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದ್ದು, ಬೆಂಗಳೂರಿಗೆ ಬರುತ್ತಿದ್ದ ನ್ಯಾಷನಲ್ ಟ್ರಾವಲ್ಸ್‌ನ ಬಸ್, ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳದ ಹಳ್ಳಕೆ ಉರುಳಿ ಬಿದ್ದಿದೆ.

ಘಟನೆಯಲ್ಲಿ ಮೃತಪಟ್ಟ ಐವರು ಪ್ರಯಾಣಿಕರ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement