ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಭೂಗತ ಪಾತಕಿ ನಿಖಿಲ್ ಶೆಟ್ಟಿ ಬಂಧನ

ಭೂಗತ ಪಾತಕಿ ರವಿ ಪೂಜಾರಿ ಸಹಚರ ನಿಖಿಲ್ ಶೆಟ್ಟಿಯನ್ನು ನವದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

Srinivasa Murthy VN
Updated On : 14 Jun 2013, 6:04 am

ನವದೆಹಲಿ: ಭೂಗತ ಪಾತಕಿ ರವಿ ಪೂಜಾರಿ ಸಹಚರ ನಿಖಿಲ್ ಶೆಟ್ಟಿಯನ್ನು ನವದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಶೂಟೌಟ್, ಬೆದರಿಕೆ ಮತ್ತು ಸುಲಿಗೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ನಿಖಿಲ್ ಶೆಟ್ಟಿಯನ್ನು ನವದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ದೆಹಲಿ ವಿಮಾನ ನಿಲ್ದಾಣ ಪೊಲೀಸರು ಮತ್ತು ಮಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಿಖಿಲ್ ಶೆಟ್ಟಿಯನ್ನು ಬಂಧಿಸಿದ್ದಾರೆ. ಬಂಧಿತ ನಿಖಿಲ್ ಶೆಟ್ಟಿ ಭೂಗತ ಪಾತಕಿ ರವಿಪೂಜಾರಿಯ ಸಹಚರನಾಗಿದ್ದು, ಬೆಂಗಳೂರಿನಲ್ಲಿ ನಡೆದಿದ್ದ ಉದ್ಯಮಿ ದಯಾನಂದ ಪೈ ಅವರ ಮೇಲಿನ ಶೂಟೌಟ್ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗುತ್ತಿದೆ.

ನಿಖಿಲ್ ಶೆಟ್ಟಿ ಭಾರತದಿಂದ ದೆಹಲಿ ವಿಮಾನ ನಿಲ್ದಾಣದ ಮೂಲಕ ದುಬೈಗೆ ಪರಾರಿಯಾಗುವ ಕುರಿತು ಖಚಿತ ಮಾಹಿತಿ ಕಲೆಹಾಕಿದ್ದ ಕರ್ನಾಟಕ ಪೊಲೀಸರು, ಈ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇಂದು ಜಂಟಿ ಕಾರ್ಯಾಚರಣೆ ನಡೆಸಿದ ದೆಹಲಿ ಮತ್ತು ಕರ್ನಾಟಕ ಪೊಲೀಸರು ನಿಖಿಲ್ ಶೆಟ್ಟಿಯನ್ನು ಬಂಧಿಸಿದ್ದಾರೆ. ನಿಖಿಲ್ ಶೆಟ್ಟಿ ವಿರುದ್ಧ ಪೊಲೀಸರು ಈ ಹಿಂದೆ 2012ರಲ್ಲಿ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದ್ದರು.

ಅಲ್ಲದೆ ಇಂಟರ್‌ಪೋಲ್ ಮೂಲಕ ನಿಖಿಲ್ ಶೆಟ್ಟಿಯನ್ನು ಗಡಿಪಾರು ಮಾಡಲಾಗಿತ್ತು. ಇದೀಗ ಬಂಧಿತ ನಿಖಿಲ್ ಶೆಟ್ಟಿಯನ್ನು ಕರ್ನಾಟಕ ಪೊಲೀಸರು ಮಂಗಳೂರಿಗೆ ಕರೆತರುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement