ಹೋಂಸ್ಟೇ ದಾಳಿ ಪ್ರಕರಣ: 4 ಆರೋಪಿಗಳಿಗೆ ಜಾಮೀನು
ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳಿಗೆ ಶುಕ್ರವಾರ ಹೈಕೋರ್ಟ್ ಜಾಮೀನು ಮಂಜೂರು..
ಬೆಂಗಳೂರು: ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳಿಗೆ ಶುಕ್ರವಾರ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಕಳೆದ ವರ್ಷ ಜುಲೈ 28ರಂದು ನಡೆದ ಹೋಂ ಸ್ಟೇ ದಾಳಿ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ರಾಜೇಶ್, ತಾರಾನಾಥ್, ಶೈಲೇಶ್ ಹಾಗೂ ಶ್ರೇಯಸ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ನ ಏಕ ಸದಸ್ಯ ಪೀಠ, 20 ಸಾವಿರ ರುಪಾಯಿ ಬಾಂಡ್ ಹಾಗೂ ಓರ್ವ ವ್ಯಕ್ತಿಯ ಶೂರಿಟಿ ಮೇಲೆ ಜಾಮೀನು ನೀಡಿದೆ.
ಮಂಗಳೂರು ಬಳಿಯ ಪಡೀಲಿನ ಮಾರ್ನಿಂಗ್ ಮಿಸ್ಟ್ ಎಂಬ ಹೋಂ ಸ್ಟೇ ಮೇಲೆ ಹಿಂದು ಪರ ಸಂಘಟನೆಗಳು ದಾಳಿ ನಡೆಸಿದ್ದವು. ಈ ಸಂಬಂಧ ಪತ್ರಕರ್ತ ನವೀನ್ ಸೂರಿಂಜೆ ಸೇರಿದಂತೆ 20ಕ್ಕು ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆ ಪೈಕಿ ಇಂದು ನಾಲ್ವರಿಗೆ ಜಾಮೀನು ದೊರೆತಿದೆ. ಇನ್ನು ಈಗಾಗಲೇ ಹೈಕೋರ್ಟ್ನಿಂದ ಜಾಮೀನು ಪಡೆದಿರುವ ಪತ್ರಕರ್ತ ನವೀನ್ ಸೂರಿಂಜೆ ಅವರ ವಿರುದ್ಧದ ಪ್ರಕರಣವನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ, ಸೂರಿಂಜೆ ವಿರುದ್ಧದ ಎಲ್ಲ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ನಿರ್ಣಯ ಕೈಗೊಂಡಿದೆ.