ಅಕ್ರಮ ಗಣಿಗಾರಿಕೆ: ಗುಜರಾತ್ ಸಚಿವನಿಗೆ 3 ವರ್ಷ ಜೈಲು
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸರ್ಕಾರಕ್ಕೆ ಭಾರಿ ಹಿನ್ನಡೆಯುಂಟಾಗಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ..
ಅಹಮದಾಬಾದ್: ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸರ್ಕಾರಕ್ಕೆ ಭಾರಿ ಹಿನ್ನಡೆಯುಂಟಾಗಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಮೋದಿ ಸಂಪುಟದ ಕ್ಯಾಬಿನೆಟ್ ದರ್ಜೆ ಸಚಿರೊಬ್ಬರು ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.
ಗುಜರಾತ್ ಜಲಸಂಪನ್ಮೂಲ ಸಚಿವ ಬಾಬು ಬೊಖಾರಿಯಾ ವಿರುದ್ಧದ ಅಕ್ರಮ ಗಣಿಗಾರಿಕೆ ಆರೋಪ ಸಾಬೀತಾಗಿದ್ದು, ಶನಿವಾರ ಕೋರ್ಟ್ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
500 ಕೋಟಿ ರುಪಾಯಿ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದ ಮೇಲೆ 2006ರಲ್ಲಿ ಬಾಬು ಬೊಖಾರಿಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ 2007, ನವೆಂಬರ್ 14ರಂದು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಾಬು ಬೊಖಾರಿಯಾ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಬಾಬು ಬಿಡುಗಡೆಯಾಗಿದ್ದರು.