ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ತೆಲಂಗಾಣ ವಿವಾದ: ವಿದ್ಯಾರ್ಥಿ ಆತ್ಮಾಹುತಿ

Srinivasa Murthy VN
Updated On : 15 Jun 2013, 5:16 am

ಹೈದರಾಬಾದ್: ಆಂಧ್ರ ಪ್ರದೇಶದಲ್ಲಿ ಮತ್ತೆ ಭುಗಿಲೆದ್ದಿರುವ ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ವಿವಾದ ಇಂದು ಉಸ್ಮಾನಿಯಾ ವಿಶ್ವ ವಿದ್ಯಾಲಯದ ವಿದ್ಯಾರ್ಥಿಯನ್ನು ಬಲಿಪಡೆದಿದೆ.

ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಪದೇ ಪದೇ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಬೇಸತ್ತ ಉಸ್ಮಾನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಮೆಹಬೂಬ್‌ನಗರ ನಿವಾಸಿ ಬಂದರು ಶ್ರೀನಿವಾಸ್ ಎಂದು ಗುರುತಿಸಲಾಗಿದ್ದು, ಶ್ರೀನಿವಾಸ್ ಉಸ್ಮಾನಿಯಾ ವಿವಿಯಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ಉಸ್ಮಾನಿಯಾ ವಿವಿಯ ಗ್ರಂಥಾಲಯದ ಆವರಣದಲ್ಲಿ ಶ್ರೀನಿವಾಸ್ ಮೃತ ದೇಹ ಪತ್ತೆಯಾಗಿದ್ದು, ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕೆವ್ಯಕ್ತವಾಗುತ್ತಿದೆ.

ಶ್ರೀನಿವಾಸ್ ಮೃತದೇಹವನ್ನು ಗಾಂಧಿ ವೈದ್ಯಕೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ತೆಲಂಗಾಣ ವಿವಾದ ಕುರಿತು ಶ್ರೀನಿವಾಸ್ ಕಳೆದ ಕೆಲವು ದಿನಗಳಿಂದ ತೀರಾ ಬೇಸರಗೊಂಡಿದ್ದ ಎಂದು ಆತನ ಗೆಳೆಯರು ತಿಳಿಸಿದ್ದಾರೆ.

ನಿನ್ನೆಯಷ್ಟೇ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗಾಗಿ 'ಅಸೆಂಬ್ಲಿ ಚಲೋ' ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ನಿನ್ನೆ ಪೊಲೀಸರ ಮಧ್ಯ ಪ್ರವೇಶವನ್ನು ಖಂಡಿಸಿದ್ದ ತೆಲಂಗಾಣ ಜಂಟಿ ಕಾರ್ಯಕಾರಿ ಸಮಿತಿಯು ಇಂದು ತೆಲಂಗಾಣ ಬಂದ್‌ಗೆ ಕರೆ ನೀಡಿತ್ತು. ಹೀಗಾಗಿ ಹೈದರಾಬಾದ್ ಸೇರಿದಂತೆ ತೆಲಂಗಾಣ ಭಾಗದ ಸುಮಾರು 10 ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement