ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮುಳಬಾಗಿಲು ಬಳಿ ಬಸ್ಸು-ಲಾರಿ ಮುಖಾಮುಖಿ ಡಿಕ್ಕಿ: 3 ಸಾವು

ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪದ ವಡ್ಡಹಳ್ಳಿ ಚೆಕ್‌ಪೋಸ್ಟ್ ಬಳಿ ಆಂಧ್ರಪ್ರದೇಶ ಸಾರಿಗೆ ಸಂಸ್ಥೆಗೆ ಸೇರಿದ..

Lingaraj Badiger
Updated On : 15 Jun 2013, 11:47 am

ಬೆಂಗಳೂರು: ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪದ ವಡ್ಡಹಳ್ಳಿ ಚೆಕ್‌ಪೋಸ್ಟ್ ಬಳಿ ಆಂಧ್ರಪ್ರದೇಶ ಸಾರಿಗೆ ಸಂಸ್ಥೆಗೆ ಸೇರಿದ ವೋಲ್ವೊ ಬಸ್ ಹಾಗೂ ಹುಂಡೈ ಕಾರುಗಳನ್ನು ಸಾಗಿಸುತ್ತಿದ್ದ ಲಾರಿ ಮಧ್ಯೆ ಭೀಕರ ಆಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಜೀವ ದಹನವಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿನ್ನೆ ಮಧ್ಯ ರಾತ್ರಿ ಈ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ವೋಲ್ವೊ ಬಸ್ ಹಾಗೂ ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಲಾರಿ ಮಧ್ಯ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳಿಗು ಬೆಂಕಿ ತಗುಲಿದೆ. ಇಂದರಿಂದ ಬಸ್‌ನಲ್ಲಿದ್ದ ಪ್ರಿಯಾ ಹಾಗೂ ಶ್ರೀನಿವಾಸ್ ಎಂಬ ಇಬ್ಬರು ಪ್ರಾಯಣಿಕರು ಮತ್ತು ಲಾರಿಯಲ್ಲಿದ್ದ ಕ್ಲೀನರ್ ಸೇರಿ ಮೂವರು ಸಜೀವ ದಹನವಾಗಿದ್ದಾರೆ. ಅಪಘಾತದಲ್ಲಿ 15ಕ್ಕು ಹೆಚ್ಚು ಮಂದಿಗ ಸುಟ್ಟ ಗಾಯಗಳಾಗಿದ್ದು, ಮುಳಬಾಗಿಲು ಸರ್ಕಾರಿ ಆಸ್ಪತ್ರೆ ಹಾಗೂ ಕೋಲಾರದ ಆರ್‌ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಮುಳಬಾಗಿಲು ಪೊಲೀಸರು ಹಾಗೂ ಆಂಧ್ರ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement