ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

'ಮಹಾ' ಮಳೆ: ರಾಜ್ಯದ ಅಣೆಕಟ್ಟುಗಳಿಗೆ ಹರಿದ ನೀರು

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕರ್ನಾಟಕದ ಅಣೆಕಟ್ಟುಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.

Srinivasa Murthy VN
Updated On : 18 Jun 2013, 5:02 am

ಬೆಂಗಳೂರು: ನೆರೆಯ ಮಹಾರಾಷ್ಟ್ರದಲ್ಲಿ ಸತತ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕರ್ನಾಟಕದ ಅಣೆಕಟ್ಟುಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗದಲ್ಲಿ ಬೀಳುತ್ತಿರುವ ಮಳೆಯಿಂದಾಗಿ ರಾಜ್ಯದ ನದಿಗಳು ತುಂಬಿ ಹರಿಯುತ್ತಿವೆ. ಅಲ್ಲದೆ ಕಳೆದ ಒಂದು ವರ್ಷದಿಂದ ಬರಡು ಬರಡಾಗಿದ್ದ ಅಣೆಕಟ್ಟುಗಳು ಇದೀಗ ನಿಧಾನವಾಗಿ ಮೈದುಂಬಿಕೊಳ್ಳುತ್ತಿವೆ. ಮಳೆಯಿಂದಾಗಿ ಮಹಾರಾಷ್ಟ್ರದ ಕೋಯ್ನಾ ಅಣೆಕಟ್ಟು ತುಂಬಿದ್ದು, ಅಣೆಕಟ್ಟಿನಿಂದ ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದೆ. ಹೀಗಾಗಿ ಕರ್ನಾಟಕದ ಆಲಮಟ್ಟಿ ಅಣೆಕಟ್ಟಿಗೆ ಸುಮಾರು 2.362 ಕ್ಯೂಸೆಕ್ಸ್ ನೀರು ಹರಿದು ಬಂದಿದೆ. ಕಳೆದ ಭಾನುವಾರ 1008 ಕೂಸೆಕ್ಸ್ ನೀರು ಹರಿದು ಬಂದಿತ್ತು. ಆದರೆ ಸೋಮವಾರ ಒಂದೇ ದಿನದಲ್ಲಿ 2362 ಕ್ಯೂಸೆಕ್ಸ್ ನೀರು ಹರಿದುಬಂದಿದೆ.

ಅಣೆಕ್ಟಟೆ ಒಳಹರಿವು ಹೆಚ್ಚಾಗುತ್ತಿದ್ದು, ಮುಂದಿನ ಮೂರು ದಿನಗಳಲ್ಲಿ ಮತ್ತಷ್ಟು ನೀರು ಹರಿದು ಬರುವ ನಿರೀಕ್ಷೆ ಇದ್ದು, ಅಣೆಕಟ್ಟೆಯಲ್ಲಿ ಈಗಾಗಲೇ 506.72 ಮೀಟರ್ ನೀರು ಸಂಗ್ರಹವಾಗಿದೆ. ಅಣೆಕಟ್ಟೆಯ ಗರಿಷ್ಟ ನೀರಿನ ಪ್ರಮಾಣ 219 ಮೀಟರ್ಗಳಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದೆ.
ಅಂತೆಯೇ ಶಿವಮೊಗ್ಗ, ಕೊಡಗು, ಭಾಗಮಂಡಲ ಮತ್ತು ಮಡಿಕೆರಿ ಜಿಲ್ಲೆಗಳಲ್ಲಿ ಬೀಳುತ್ತಿರುವ ಮಳೆಯಿಂದಾಗಿ ಕಾವೇರಿ ಕೊಳ್ಳದ ನದಿಗಳಿಗೆ ನೀರು ಹರಿಯುತ್ತಿವೆ.

ತುಂಗಭದ್ರಾ ಜಲಾಶಯಕ್ಕೆ ಕಳೆದ ಮೂರು ದಿನಗಳಿಂದ ಹರಿಯುತ್ತಿರುವ ನೀರಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದ್ದು, ಮೂರು ದಿನಗಳಿಂದ 9 ಸಾವಿರ ಕ್ಯೂಸೆಕ್ಸ್ನಷ್ಟು ನೀರು ಜಲಾಶಯವನ್ನು ಸೇರಿದೆ. ಲಿಂಕನಮಕ್ಕಿ ಅಣೆಕಟ್ಟಿಗೂ ಕೂಡ ಸಾಕಷ್ಟು ನೀರು ಹರಿದು ಬಂದಿದೆ. ಕಳೆದ ಶನಿವಾರ ಭಾಗಮಂಡಲದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕಾವೇರಿ ಸೇರಿದಂತೆ ಅದರ ಉಪನದಿಗಳಾದ ಸುಜ್ಯೋತಿ ಮತ್ತು ಕನ್ನಿಕೆ ನದಿಗಳಲ್ಲಿನ ನೀರಿನ ಮಟ್ಟ ಏರಿಕೆಯಾಗಿದೆ. ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ದಿನೇ ದಿನೇ ಏರಿಕೆಯಾಗುತ್ತಿದ್ದು, 3,662 ಕ್ಯೂಸೆಕ್ಸ್ ನೀರಿನ ಒಳಹರಿವಿದೆ.

ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟಿನಲ್ಲಿ ಕೇವಲ ಒಂದೇ ದಿನದಲ್ಲಿ ನೀರಿನ ಮಟ್ಟ 2.5 ಅಡಿ ಏರಿಕೆಯಾಗಿದ್ದು, ಕೆಆರ್ಎಸ್ ಒಳಹರಿವು ದಿನೇ ದಿನೇ ಹೆಚ್ಚಾಗುತ್ತಿದೆ. ಒಟ್ಟಾರೆ ಕಳೆದ ಮೂರು ದಿನಗಳಿಂದ ಬೀಳುತ್ತಿರುವ ಮಳೆಯಿಂದಾಗಿ ರಾಜ್ಯದ ಜಲಾಶಯಗಳು ಭರ್ತಿಯಾಗುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement