ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಉತ್ತರಾಖಂಡ್ ಪ್ರವಾಹ: ಸಾವಿರ ಕೋಟಿ ನೆರವು ಘೋಷಣೆ

ಪ್ರವಾಹದಿಂದಾಗಿ ತತ್ತರಿಸಿರುವ ಉತ್ತರಾಖಂಡ್ ರಾಜ್ಯಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಾವಿರಕೋಟಿ ನೆರವು ಘೋಷಣೆ ಮಾಡಿದ್ದಾರೆ.

Srinivasa Murthy VN
Updated On : 19 Jun 2013, 7:26 am

ನವದೆಹಲಿ: ಪ್ರವಾಹದಿಂದಾಗಿ ತತ್ತರಿಸಿರುವ ಉತ್ತರಾಖಂಡ್ ರಾಜ್ಯಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಾವಿರಕೋಟಿ ನೆರವು ಘೋಷಣೆ ಮಾಡಿದ್ದಾರೆ.

ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜಂಟಿಯಾಗಿ ಇಂದು ಮಧ್ಯಾಹ್ನ ಪ್ರವಾಹ ಪೀಡಿತ ಉತ್ತರಾಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ನಂತರ ಸಭೆ ಸೇರಿ ಚರ್ಚಿಸಿದ ಉಭಯ ನಾಯಕರು, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದರು. ಅತಿ ಹೆಚ್ಚು ಹಾನಿಗೊಳಗಾಗಿರುವ ಉತ್ತರಾಖಂಡ್ ರಾಜ್ಯಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ಅವರು ವಿಶೇಷ ನೆರವು ಘೋಷಣೆ ಮಾಡಿದ್ದಾರೆ.

ಪ್ರವಾಹದಿಂದಾಗಿ ತೀವ್ರವಾಗಿ ತತ್ತರಿಸಿರುವ ಉತ್ತರಾಖಂಡ್ ಸರ್ಕಾರಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಾವಿರ ಕೋಟಿ ರುಪಾಯಿ ನೆರವು ನೀಡಲು ಮುಂದಾಗಿದ್ದು, ತತ್‌ಕ್ಷಣ 45 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಅಂತೆಯೇ ಪ್ರವಾಹ ಪೀಡಿತ ಪ್ರದೇಶಗಳಿಂದ ವರದಿ ಪಡೆದಿರುವ ಪ್ರಧಾನಿ ಸಿಂಗ್, ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅಲ್ಲದೆ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಯಾತ್ರಾರ್ಥಿಗಳ ರಕ್ಷಣೆಗಾಗಿ ನಿಯೋಜಿಸಲಾಗಿರುವ ಭದ್ರತಾ ಸಿಬ್ಬಂದಿಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವಂತೆ ರಕ್ಷಣಾ ಇಲಾಖೆಗೆ ಪ್ರಧಾನಿ ಮನಮೋಹನ್ ಸಿಂಗ್ ಸೂಚಿಸಿದ್ದಾರೆ.

ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಲ್ಲಿ ಸಿಲುಕಿ ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಅಲ್ಲದೆ ಪ್ರಸ್ತುತ ಸರ್ಕಾರದ ಗಮನಕ್ಕೆ ಬಂದಂತೆ ಪ್ರವಾಹದಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪ್ರವಾಹಕ್ಕೆ ಸಿಲುಕಿ ಇದುವರೆವಿಗೂ ಸುಮಾರು ಸಾವಿರಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ರಕ್ಷಣಾಕಾರ್ಯ ಭರದಿಂದ ಸಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement