ಕಲ್ಲಿದ್ದಲು ಹಗರಣ: 13ನೇ ಎಫ್ಐಆರ್ ದಾಖಲಿಸಿದ ಸಿಬಿಐ
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ, ಈ ಸಂಬಂಧ ಬುಧವಾರ ..
ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ, ಈ ಸಂಬಂಧ ಬುಧವಾರ ದೆಹಲಿ ಮೂಲದ ಸ್ಟೀಲ್ ಕಂಪನಿ ವಿರುದ್ಧ ಹೊಸ ಎಫ್ಐಆರ್ ದಾಖಲಿಸಿದೆ ಮತ್ತು ಕಂಪನಿಗೆ ಸೇರಿದ ಹಲವು ಕಚೇರಿಗಳ ಮೇಲೆ ದಾಳಿ ನಡೆಸಿದೆ.
ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪದ ಮೇಲೆ ರಾಠಿ ಸ್ಟೀಲ್ ಆಂಡ್ ಪವರ್ ಲಿಮಿಟೆಡ್ ಹಾಗೂ ಅದರ ನಿರ್ದೇಶಕ ಉದಿತ್ ರಾಠಿ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಈವರೆಗೆ ಕಲ್ಲಿದ್ದಲು ಹಗರಣ ಸಂಬಂಧ ಸಿಬಿಐ ದಾಖಲಿಸಿದ 13ನೇ ಎಫ್ಐಆರ್ ಇದಾಗಿದೆ.
ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಹಲವು ನಿವಾಸಗಳ ಮೇಲೆ ಹಾಗೂ ಕಂಪನಿಗೆ ಸೇರಿದ ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿ, ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ.