ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನನ್ನ ಹತ್ಯೆಗೆ ಸಿಪಿಐಎಂ ಸಂಚು ರೂಪಿಸಿದೆ: ಮಮತಾ

ಮತ್ತೆ ಅಧಿಕಾರಕ್ಕೆ ಬರುವ ಉದ್ದೇಶದಿಂದ ಸಿಪಿಐ(ಎಂ) ತಮ್ಮ ಹತ್ಯೆಗೆ ಸಂಚು ರೂಪಿಸಿದೆ ಎಂದು ಪಶ್ಚಿಮ..

Lingaraj Badiger
Updated On : 19 Jun 2013, 6:45 am

ಚಾಂದಪರ(ಪಶ್ಚಿಮ ಬಂಗಾಳ): ಮತ್ತೆ ಅಧಿಕಾರಕ್ಕೆ ಬರುವ ಉದ್ದೇಶದಿಂದ ಸಿಪಿಐ(ಎಂ) ತಮ್ಮ ಹತ್ಯೆಗೆ ಸಂಚು ರೂಪಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.

ಬೊಂಗೋನ್‌ನಲ್ಲಿ ಗ್ರಾಮ ಪಂಚಾಯತ್ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ರಾಜ್ಯದಲ್ಲಿ ಮತ್ತೆ ಅಧಿಕಾರಿಯ ಹಿಡಿಯುವ ದುರುದ್ದೇಶದಿಂದ ಸಿಪಿಐಎಂ ನಕ್ಸಲರೊಂದಿಗೆ ಸೇರಿ ತಮ್ಮ ಹತ್ಯೆಗೆ ಸಂಚು ರೂಪಿಸಿದೆ ಮತ್ತು ಈ ಬಗ್ಗೆ ತಮಗೆ ಗುಪ್ತಚರ ಇಲಾಖೆಯಿಂದ ಖಚಿತ ಮಾಹಿತಿ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ ದೀದಿ, ಸಿಪಿಐಎಂ, ಕಾಂಗ್ರೆಸ್ ಹಾಗೂ ಬಿಜೆಪಿ ಎಲ್ಲರೂ ಸೇರಿ ತಮ್ಮ ಸರ್ಕಾರದ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದರು. ಆದರೆ ರಾಜ್ಯದ ಜನತೆ ನನ್ನೊಂದಿಗೆ ಇರುವುದರಿಂದ ಅವರು ನನ್ನ ಕೂಲದನ್ನು ಮುಟ್ಟಲು ಸಾಧ್ಯವಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement