ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಜನಾರ್ದನ ರೆಡ್ಡಿ ಜಾಮೀನು ಅರ್ಜಿ ವಜಾ

ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಓಬಳಾಪುರಂ ಗಣಿ...

Vishwanath S
Updated On : 20 Jun 2013, 7:23 am

ಹೈದರಾಬಾದ್: ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಓಬಳಾಪುರಂ ಗಣಿ ಕಂಪನಿ(ಒಎಂಸಿ)ಯ ನಿರ್ದೇಶಕ ಬಿ.ವಿ. ಶ್ರೀನಿವಾಸ ರೆಡ್ಡಿ ಅವರ ಜಾಮೀನು ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ಕಳೆದ ಶುಕ್ರವಾರ ಜನಾರ್ದನ ರೆಡ್ಡಿ ಹಾಗೂ ಶ್ರೀನಿವಾಸ್ ರೆಡ್ಡಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಕೆ.ಜಿ. ಶಂಕರ್ ಅವರು ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು. ಇಂದು ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಸಿಬಿಐ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

ಆರೋಪಿಗಳು ಹೆಚ್ಚು ಪ್ರಭಾವ ಹೊಂದಿರುವುದರಿಂದ ಜಾಮೀನು ನೀಡಿದರೆ ಸಾಕ್ಷ್ಯ ನಾಶ ಪಡಿಸುವ ಅವಕಾಶವಿರುವುದರಿಂದ ಜಾಮೀನು ನೀಡದಂತೆ ಸಿಬಿಐ ಅಧಿಕಾರಿಗಳು ವಾದಿಸಿದ್ದರು.

ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪನಿಯ ಮೂಲಕ ಆಂಧ್ರಪ್ರದೇಶದ ಅನಂತಪುರದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದ ಮೇಲೆ ಈ ಇಬ್ಬರನ್ನು ಸೆಪ್ಟೆಂಬರ್ 2011ರಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement