ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ವಿಪಕ್ಷಗಳು ಅಸ್ಥಿರತೆ ಮೂಡಿಸಲು ಯತ್ನಿಸುತ್ತಿವೆ: ಸೋನಿಯಾ

ಕಾಂಗ್ರೆಸ್‌ನ ಬಹು ನಿರೀಕ್ಷಿತ ಆಹಾರ ಭದ್ರತೆ ಮಸೂದೆ ಅಂಗೀಕಾರಕ್ಕೆ ಸಹಕಾರ ನೀಡದ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್

Vishwanath S
Updated On : 20 Jun 2013, 5:36 am

ಸುರತ್ಗರ್: ಕಾಂಗ್ರೆಸ್‌ನ ಬಹು ನಿರೀಕ್ಷಿತ ಆಹಾರ ಭದ್ರತೆ ಮಸೂದೆ ಅಂಗೀಕಾರಕ್ಕೆ ಸಹಕಾರ ನೀಡದ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ವಿಪಕ್ಷಗಳು ದೇಶದಲ್ಲಿ ಅಸ್ತಿರತೆ ಉಂಟು ಮಾಡಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.

ಸುರತ್ಗರ್‌ನಲ್ಲಿ ಇಂದು ಕಾಂಗ್ರೆಸ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಪಕ್ಷಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಕೆಲವು ರಾಜಕೀಯ ಪಕ್ಷಗಳು  ದೇಶದಲ್ಲಿ ಅಸ್ಥಿರತೆ ಉಂಟು ಮಾಡಲು ಯತ್ನಿಸುತ್ತಿವೆ. ಆದರೆ ಇದರಿಂದ ಯಾವುದೇ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಅವರು ಅಧಿಕಾರಕ್ಕಾಗಿ ಮಾತ್ರ ಇಂತಹ ಕೆಲಸ ಮಾಡುತ್ತಿದ್ದಾರೆ. ಇದರಿಂದ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದರು.

ಪ್ರತಿಯೊಬ್ಬ ಪ್ರಜೆಗೂ ಆಹಾರ ಭದ್ರತೆ ಸಿಗುವಂತೆ ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಆದರೆ ಇಂತಹ ಕಾರ್ಯಕ್ಕೆ ವಿಪಕ್ಷಗಳು ಸಹಕಾರ ನೀಡದೆ ಇರುವುದು ಮಸೂದೆ ಜಾರಿಗೆ ತರಲು ಸಾಧ್ಯವಿಲ್ಲ ಎಂದರು.

ಆಹಾರ ಭದ್ರತೆ ಮಸೂದೆಯನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಸರಿಯಾಗಿ ಆಡಳಿತ ನಿರ್ವಹಿಸಲು ಸಹಕರಿಸುತ್ತಿಲ್ಲ. ಜೊತೆಗೆ ದೇಶದಲ್ಲಿ ಅಸ್ತಿರತೆ ಉಂಟುಮಾಡಲು ಪ್ರಯತ್ನಿಸುತ್ತಿವೆ. ಇದು ಹೀಗೆ ಮುಂದುವರೆದರೆ ದೇಶ ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement