ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಇನ್ನು 32000 ಮಂದಿ ಬೆಟ್ಟಗುಡ್ಡಗಳಲ್ಲಿ ಸಿಲುಕಿದ್ದಾರೆ; ಶಿಂಧೆ

ಪ್ರವಾಹ ಹಾಗೂ ಭೂಕುಸಿತದಿಂದಾಗಿ ಉತ್ತರಾಖಂಡನ ಸುತ್ತ ಮುತ್ತಲಿನ ಬೆಟ್ಟ ಗುಡ್ಡಗಳಲ್ಲಿ ಸುಮಾರು 32000 ಮಂದಿ ಸಿಲುಕಿಕೊಂಡಿದ್ದಾರೆ...

Vishwanath S
Updated On : 22 Jun 2013, 2:33 am

ನವದೆಹಲಿ/ಡೆಹ್ರಾಡೂನ್: ಪ್ರವಾಹ ಹಾಗೂ ಭೂಕುಸಿತದಿಂದಾಗಿ ಉತ್ತರಾಖಂಡನ ಸುತ್ತ ಮುತ್ತಲಿನ ಬೆಟ್ಟ ಗುಡ್ಡಗಳಲ್ಲಿ ಸುಮಾರು 32000 ಮಂದಿ ಸಿಲುಕಿಕೊಂಡಿದ್ದಾರೆ ಎಂದು  ಶನಿವಾರ ಕೇಂದ್ರ ಗೃಹ ಸಚಿವ ಸುಶೀಲ್‌ಕುಮಾರ್ ಶಿಂಧೆ ಮಾಹಿತಿ ನೀಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಿಂಧೆ ಅವರು, ಉತ್ತರಾಖಂಡನ ಬೆಟ್ಟ ಗುಡ್ಡಗಳಲ್ಲಿ ಸಿಲುಕಿಕೊಂಡಿದ್ದ 30 ಸಾವಿರ ಪ್ರವಾಸಿಗರನ್ನು ಈಗಾಗಲೇ ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದು, ಇನ್ನುಳಿದಂತೆ ಬೆಟ್ಟದ ತುದಿಗಳಲ್ಲಿ ಆಶ್ರಯ ಪಡೆದಿರುವ ಇನ್ನು 32 ಸಾವಿರ ಪ್ರವಾಸಿಗರ ರಕ್ಷಣೆಗೆ ರಕ್ಷಣಾ ಸಿಬ್ಬಂದಿ ಮುಂದಾಗಿದ್ದಾರೆ. ಸದ್ಯ ಉತ್ತರಾಖಂಡದಲ್ಲಿ ಪ್ರತಿಕೂಲ ವಾತವರಣವಿದ್ದರು ಸಹ ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಶಿಂಧೆ ತಿಳಿಸಿದರು.

ಭೂಕುಸಿತದಿಂದಾಗಿ ರಸ್ತೆಗಳಲ್ಲಯೇ ಮಣ್ಣು ಹಾಗೂ ಕಲ್ಲುಗಳ ರಾಶಿ ಬಿದ್ದಿರುವುದರಿಂದ ರಕ್ಷಣಾ ಸಿಬ್ಬಂದಿಗೆ ಪ್ರವಾಸಿಗರನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಪ್ರತ್ಯೇಕ ರಸ್ತೆಗಳನ್ನು ಸಾಧ್ಯವಾದಷ್ಟು ಬೇಗ ನಿರ್ಮಿಸುವಂತೆ ಬಾರ್ಡರ್ ರೋಡ್ಸ್ ಸಂಸ್ಥೆಗೆ ಸೂಚಿಸಲಾಗಿದೆ. ಅಲ್ಲದೆ ಪ್ರವಾಸಿಗರ ರಕ್ಷಣಾ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಇನ್ನೆರಡು ದಿನಗಳಲ್ಲಿ ರಕ್ಷಣಾ ಕಾರ್ಯ ಮುಗಿಯುವ ಸಾಧ್ಯತೆಗಳಿವೆ ಎಂದು  ಶಿಂಧೆ ಹೇಳಿದ್ದಾರೆ.

ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿರುವ ಕೆಲ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ತೀರ ಕೊಳೆತಿರುವುದರಿಂದ ಮೃತದೇಹಗಳನ್ನು ಗುರುತು ಪತ್ತೆ ಹಚ್ಟಲು ಸಾಧ್ಯವಾಗದೆ ಇರುವುದರಿಂದ ಮೃತದೇಹಗಳನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸುವುದಾಗಿ ಹೇಳಿದ್ದಾರೆ.

ಉತ್ತರಾಖಂಡನ ಜಂಗಲ್‌ಚೆಟ್ಟಿ ಎಂಬಲ್ಲಿ 200ಕ್ಕೂ ಅಧಿಕ ಮಂದಿ ಆಹಾರವಿಲ್ಲದೇ ಬಳಲುತ್ತಿರುವುದಾಗಿ ತಿಳಿದುಬಂದಿದೆ. ಹೀಗಾಗಿ ಅವರಿಗೆ ಕೂಡಲೇ ಆಹಾರ ತಲುಪಿಸುವ ಕಾರ್ಯದಲ್ಲಿ ಸಕ್ರಿಯರಾಗಿರುವುದಾಗಿ ಶಿಂಧೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement