ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಿತೀಶ್‌ಗೆ ಪಿಎಂ ಆಗುವಾಸೆ: ಗಡ್ಕರಿ

Srinivasa Murthy VN
Updated On : 22 Jun 2013, 7:49 am

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪ್ರಧಾನಿ ಆಗಬೇಕೆಂಬ ಆಸೆ ಇರುವುದರಿಂದ ಅವರು ಓಟ್ ಬ್ಯಾಂಕ್ ರಾಜಕೀಯಕ್ಕೆ ಮುಂದಾಗಿದ್ದಾರೆ ಎಂದು ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.

ಜಾರ್ಖಂಡ್‌ನ ಧಂಡ್‌ಬಾದ್‌ನಲ್ಲಿ ನಡೆದ ಬಿಜೆಪಿ ಕಾರ್ಯಕಾರಿ ಸಭೆಯಲ್ಲಿ ಪಾಲ್ಗೊಂಡಿದ್ದ ನಿತಿನ್ ಗಡ್ಕರಿ ಅವರು, ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದ ಜೆಡಿ(ಯು) ನಾಯಕರ ವಿರುದ್ಧ ಹರಿಹಾಯ್ದರು. 'ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ದೇಶದ ಪ್ರಧಾನಿಯಾಗಬೇಕೆಂಬ ಆಸೆ ಇದೆ. ಹೀಗಾಗಿಯೇ ಅವರು ಮುಸ್ಲಿಂ ಮತದಾರರನ್ನು ಓಲೈಸಿಕೊಳ್ಳುವ ಸಲುವಾಗಿ ಎನ್‌ಡಿಎಯನ್ನು ತೊರೆಯುವ ಮೂಲಕ ಓಟ್ ಬ್ಯಾಂಕ್ ರಾಜಕೀಯಕ್ಕೆ ಮುಂದಾಗಿದ್ದಾರೆ ಎಂದು ಗಡ್ಕರಿ ಹೇಳಿದರು.

ಅಂತೆಯೇ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಪರ ಬ್ಯಾಟಿಂಗ್ ಮಾಡಿದ ಗಡ್ಕರಿ, ಬಿಜೆಪಿ ಅಧಿಕಾರ ನಡೆಸುತ್ತಿರುವ ಗುಜರಾತ್‌ನಲ್ಲಿ ಸಾಕಷ್ಟು ಅಭಿವೃದ್ಧಿಗಳು ಕೆಲಸಗಳು ನಡೆದಿವೆ. ಈ ಹಿಂದೆ ನರೇಂದ್ರ ಮೋದಿ ಅವರ ಯಾವ ಗುಣಗಳನ್ನು ನಿತೀಶ್ ಶ್ಲಾಘಿಸುತ್ತಿದ್ದರೋ ಇಂದು ಅದೇ ಗುಣಗಳನ್ನು ಅವರು ತೆಗಳುತ್ತಿದ್ದಾರೆ. ಇದು ಅವರ ಓಟ್ ಬ್ಯಾಂಕ್ ರಾಜಕೀಯಕ್ಕೆ ಸಾಕ್ಷಿಯಾಗಿದೆ ಎಂದು ಗಡ್ಕರಿ ಹೇಳಿದರು.

ಒಟ್ಟಾರೆ ಎನ್‌ಡಿಎ ಮೈತ್ರಿಕೂಟದಿಂದ ಜೆಡಿ(ಯು) ಹೊರನಡೆದ ದಿನದಿಂದಲೂ ಉಭಯ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿಯಲ್ಲಿ ಮುಳುಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement