ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಾಜ್ಯದ ಸಂತ್ರಸ್ಥರಿಗೆ ಆಹಾರ, ಔಷಧ ವ್ಯವಸ್ಥೆ ಕಲ್ಪಿಸಿ: ಶೋಭಾ

ಉತ್ತರಾಖಂಡ್‌ನ ಪ್ರವಾಹಕ್ಕೆ ಸಿಲುಕಿ ಆಹಾರ, ಔಷಧಿ ಇಲ್ಲದೆ ತತ್ತರಿಸಿರುವ ಕನ್ನಡಿಗರ ರಕ್ಷಣೆಗೆ...

Vishwanath S
Updated On : 22 Jun 2013, 4:33 am

ಬೆಂಗಳೂರು: ಉತ್ತರಾಖಂಡ್‌ನ ಪ್ರವಾಹಕ್ಕೆ ಸಿಲುಕಿ ಆಹಾರ, ಔಷಧಿ ಇಲ್ಲದೆ ತತ್ತರಿಸಿರುವ ಕನ್ನಡಿಗರ ರಕ್ಷಣೆಗೆ ಧಾವಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ಮನವಿ ಮಾಡಿದ್ದಾರೆ.

ಉತ್ತರಾಖಂಡ್‌ನಲ್ಲಿ ಪ್ರವಾಹಕ್ಕೆ ಸಿಲುಕಿ ಸುರಕ್ಷಿತವಾಗಿ ರಾಜ್ಯಕ್ಕಾಗಿಮಿಸಿದ್ದ ಶೋಭಾ ಅವರು, ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಉತ್ತರಾಖಂಡನಲ್ಲಿನ ಪರಿಸ್ಥಿತಿಯ ಗಂಭೀರತೆಯನ್ನು ಮನವರಿಕೆ ಮಾಡಿಕೊಟ್ಟರು. ಅಲ್ಲದೇ ಈ ಕೂಡಲೆ ಕನ್ನಡಿಗರ ರಕ್ಷಣೆಗೆ ಮುಂದಾಗಬೇಕು ಹಾಗೂ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಉತ್ತರ ಭಾರತದಲ್ಲಿ ಜೂನ್ 25ರಂದು ಮತ್ತೆ ಭಾರಿ ಮಳೆಯಾಗುವ ಸಾಧ್ಯತೆಗಳ ಬಗ್ಗೆ ಹವಾಮಾವ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಪರಿಸ್ಥಿತಿ ಮತ್ತಷ್ಟು ಹದಗೆಡುವ ಮುನ್ನ ರಾಜ್ಯದ ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆಸಿಕೊಳ್ಳಲು ಸರ್ಕಾರ ಮುಂದಾಗಬೇಕು ಎಂದು ಶೋಭಾ ಹೇಳಿದ್ದಾರೆ.

ಅತಿಯಾದ ಮಳೆಯಿಂದಾಗಿ ಭೂಕುಸಿತ ಸಂಬಂವಿಸಿದ್ದು, ಪ್ರವಾಸಿಗರು ಸುರಕ್ಷಿತ ಸ್ಥಳಗಳಿಗೆ ಸಂಚರಿಸಲು ಸಾಧ್ಯವಾಗದೆ ಬೆಟ್ಟಗುಡ್ಡಗಳಲ್ಲಿ ಆಶ್ರಯ ಪಡೆದಿದ್ದಾರೆ. ಅತಿಯಾದ ಚಳಿಯಿಂದಾಗಿ ಪ್ರವಾಸಿಗರು ಕಾಯಿಲೆಗಳಿಗೆ ತುತ್ತಾಗಿದ್ದಾರೆ. ಹೀಗಾಗಿ ಪ್ರವಾಸಿಗರಿಗೆ ವೈದ್ಯರ ನೇರವಿನ ಅಗತ್ಯತೆ ಇದೆ. ರಾಜ್ಯದಿಂದ ವೈದ್ಯರ ತಂಡವನ್ನು ಕಳುಹಿಸಿಕೊಡುವಂತೆ ಕೇಳಿಕೊಂಡಿದ್ದಾರೆ.

ಸದ್ಯ ರಾಜ್ಯದ ಪ್ರವಾಸಿಗರಿಗೆ ಮೂಲ ವಸ್ತುಗಳ ಅವಶ್ಯಕತೆ ಇರುವುದರಿಂದ ಸಾಧ್ಯವಾದಷ್ಟು ಬೇಗ ಆಹಾರ, ಔಷಧಗಳ ಪೂರೈಕೆಯಾಗಬೇಕು. ಇಲ್ಲದಿದ್ದರೆ ಹೆಚ್ಚಿನ ಪ್ರಾಣ ಹಾನಿಯಾಗುವ ಸಾಧ್ಯತೆಗಳಿವೆ ಎಂದು ಶೋಭಾ ಸಿಎಂಗೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement