ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಖ್ಯಾತ ಸಂಭಾಷಣೆಕಾರ ಕುಣಿಗಲ್ ನಾಗಭೂಷಣ್ ನಿಧನ

ಕನ್ನಡ ಚಿತ್ರರಂಗದ ಖ್ಯಾತ ಸಂಭಾಷಣೆಕಾರ ಕುಣಿಗಲ್ ನಾಗಭೂಷಣ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

Srinivasa Murthy VN
Updated On : 23 Jun 2013, 10:54 am

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಸಂಭಾಷಣೆಕಾರ ಕುಣಿಗಲ್ ನಾಗಭೂಷಣ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಳೆದ ಹಲವು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಕುಣಿಗಲ್ ನಾಗಭೂಷಣ್ ಅವರು, ಇಂದು ಬೆಳಗ್ಗೆ 1.30ರ ವೇಳೆಯಲ್ಲಿ ಹೃದಯಾಘಾತಕ್ಕೆ ತುತ್ತಾಗಿ ನಿಧನರಾಗಿದ್ದಾರೆ.  ಕಳೆದ ಹಲವು ವರ್ಷಗಳಿಂದ ಸಕ್ಕರೆ ಖಾಯಿಲೆಗೆ ತುತ್ತಾಗಿದ್ದ ನಾಗಭೂಷಣ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇತ್ತೀಚೆಗೆ ಅವರಿಗೆ ಸಕ್ಕರೆ ಖಾಯಿಲೆ ಜಾಸ್ತಿಯಾಗಿ, ಗ್ಯಾಂಗ್ರಿನ್ ಆಗಿದ್ದ ಎರಡೂ ಕಾಲುಗಳನ್ನು ವೈದ್ಯರು ಕತ್ತರಿಸಿ ತೆಗೆದುಹಾಕಿದ್ದರು.

ತದ ನಂತರವೂ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣಲಿಲ್ಲ. ಇತ್ತೀಚೆಗೆ ಅನಾರೋಗ್ಯದ ನಿಮಿತ್ತ ಅವರನ್ನು ರಾಜಾಜಿನಗರದ ಫೋರ್ಟಿಸ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಿನ್ನೆ ರಾತ್ರಿ ಅವರು ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ. 250ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ ಬರೆದಿದ್ದ ಅವರು ಹಲವಾರು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಗೌರಿ ಗಣೇಶ ಚಿತ್ರದ ಸಂಭಾಷಣೆಗಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಗಳಿಸಿದ್ದ ಕುಣಿಗಲ್ ನಾಗಭೂಷಣ್ ಅವರು, ಐದು ದಶಕಗಳಿಂದ ಚಿತ್ರರಂಗಕ್ಕೆ ಸೇವೆ ಸಲ್ಲಿಸುತ್ತಿದ್ದರು.

ಕುಣಿಗಲ್ ನಾಗಭೂಷಣ್ ಅವರ ಅಕಾಲಿಕ ಸಾವಿಗೆ ಕನ್ನಡ ಚಿತ್ರರಂಗ ಸಂತಾಪ ಸೂಚಿಸಿದ್ದು, ಚಿತ್ರರಂಗದ ಗಣ್ಯಾತಿ ಗಣ್ಯರು ಕಂಬನಿ ಮಿಡಿದಿದ್ದಾರೆ. ಇಂದು ಸಂಜೆ ಬೆಂಗಳೂರಿನಲ್ಲಿ ಅವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ ಎಂದು ಅವರ ಪುತ್ರ ಭರತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಚಿತ್ರ ಕೃಪೆ: ಚಿತ್ರಲೋಕ.ಕಾಂ
ಕುಣಿಗಲ್ ನಾಗಭೂಷಣ್ ಅವರೊಂದಿಗೆ  ೨ ವರ್ಷಗಳ ಹಿಂದೆ   ಕನ್ನಡಪ್ರಭ ನಡೆಸಿದ ಸಂದರ್ಶನ ಓದಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ
http://archives.kannadaprabha.com/NewsItems.asp?ID=KPH20111118233622&Title=Headlines&lTitle=%AE%DA%C3%A8%DB%AB%DA%20%D1%DA%DF%A6%A7&Topic=0&ndate=11/19/2011&dName=&Dist=0



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement