ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

72 ಗಂಟೆಯೊಳಗೆ ಪರಿಹಾರ ಕಾರ್ಯ ಪೂರ್ಣ: ಉತ್ತರಾಖಂಡ

ಉತ್ತರಾಖಂಡದಲ್ಲಿ ಸಿಲುಕಿರುವ ನೆರೆ ಸಂತ್ರಸ್ತರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ರಕ್ಷಣಾ ಕಾರ್ಯ ಮುಂದಿನ 72 ಗಂಟೆಗಳೊಳಗೆ...

Vishwanath S
Updated On : 25 Jun 2013, 2:47 am

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಸಿಲುಕಿರುವ ನೆರೆ ಸಂತ್ರಸ್ತರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ರಕ್ಷಣಾ ಕಾರ್ಯ ಮುಂದಿನ 72 ಗಂಟೆಗಳೊಳಗೆ ಮುಗಿಸುವುದಾಗಿ ಉತ್ತರಾಖಂಡ ಸರ್ಕಾರ ಸುಪ್ರೀಂಕೋರ್ಟ್ಗೆ ಮಂಗಳವಾರ ತಿಳಿಸಿದೆ.

ಉತ್ತರಾಖಂಡನ ಸುತ್ತ ಮುತ್ತಲಿನ ಬೆಟ್ಟಗುಡ್ಡಗಳಲ್ಲಿ ನೆಲೆ ನಿಂತಿರುವ 9 ಸಾವಿರ ನೆರೆ ಸಂತ್ರಸ್ತರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಸಂಬಂಧ ಉತ್ತರಾಖಂಡ ಸರ್ಕಾರ ಇಂದು ಸುಪ್ರೀಂಕೋರ್ಟ್ಗೆ ಸಲ್ಲಿಸಿದ ಪರಿಹಾರ ಕಾರ್ಯಾಚರಣೆಯ ವರದಿ(ಎಟಿಆರ್)ಯಲ್ಲಿ ಮುಂದಿನ 72 ಗಂಟೆಗಳಲ್ಲಿ ಪರಿಹಾರ ಕಾರ್ಯ ಮುಗಿಸುವುದಾಗಿ ಭರವಸೆ ನೀಡಿದೆ.

ಪರಿಹಾರ ಕಾರ್ಯಚರಣೆ ಸಂಬಂಧ ಸುಪ್ರೀಂಕೋರ್ಟ್ ಸೋಮವಾರ ಉತ್ತರಾಖಂಡ ಸರ್ಕಾರವನ್ನು ಪ್ರಶ್ನಿಸಿತ್ತು. ಈ ಸಂಬಂಧ ಉತ್ತರಾಖಂಡ ಸರ್ಕಾರ ಇಂದು ಸುಪ್ರೀಂಕೋರ್ಟ್ಗೆ ಎಟಿಆರ್ ವರದಿಯನ್ನು ಸಲ್ಲಿಸಿದ್ದು, ವಾತವರಣ ತಿಳಿಗೊಂಡರೆ ಮುಂದಿನ 72 ಗಂಟೆಗಳೊಳಗಾಗಿ ಪರಿಹಾರ ಕಾರ್ಯ ಮುಗಿಸುವುದಾಗಿ ವರದಿಯಲ್ಲಿ ತಿಳಿಸಿದೆ.

ಎಟಿಆರ್ ವರದಿಯಲ್ಲಿ ತಿಳಿಸಿರುವಂತೆ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿರುವರನ್ನು ಗುರುತಿಸುವ ಕಾರ್ಯಕ್ಕೆ ಹಾಗೂ ಮೃತದೇಹಗಳ ವಿಲೇವಾರಿ ಸಂಬಂಧ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅಲ್ಲದೆ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾಗಿರುವ ಸಂತ್ರಸ್ತರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿರುವುದಾಗಿ ಉತ್ತರಾಖಂಡ ಸರ್ಕಾರ ಹೇಳಿದೆ.

ಸೋಮವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಕ್ಷಣಾ ಕಾರ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು, ವಾತಾವರಣಾ ತಿಳಿಗೊಂಡ ನಂತರ ಪರಿಹಾರ ಕಾರ್ಯ ಚುರುಕುಗೊಳಿಸಲಾಗುತ್ತದೆ. ಸದ್ಯ ಮಂಗಳವಾರವು ಸುರಿಯುತ್ತಿರುವ ಮಳೆಯಿಂದಾಗಿ ಉತ್ತರಾಖಂಡನಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement