ಗಲಭೆಯಿಂದ ಬೇಸತ್ತ ಕಾಶ್ಮೀರ ಜನತೆ: ಸೋನಿಯಾ ಗಾಂಧಿ
ಜಮ್ಮು, ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಜನತೆ ಗಲಭೆಗಳಿಂದ ಬೇಸತ್ತು ಹೋಗಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಹೇಳಿದ್ದಾರೆ.
ಕಾಶ್ಮೀರದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಶ್ಮೀರದ ಜನತೆ ಗಲಭೆಗಳಿಂದ ರೋಷಿ ಹೋಗಿದ್ದಾರೆ. ಶಾಂತಿ ಮತ್ತು ಅಭಿವೃದ್ಧಿ ಇಲ್ಲಿನ ಜನತೆಗೆ ಬೇಕಾಗಿದೆ ಎಂದು ಸೋನಿಯಾ ತಿಳಿಸಿದ್ದಾರೆ.
ಇಲ್ಲಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕಾಗಿದೆ. ಕಳೆದ 5 ವರ್ಷಗಳಿಂದ ಕಾಂಗ್ರೆಸ್ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡವಲ್ಲಿ ಯಶಸ್ವಿಯಾಗಿದೆ. ಯುಪಿಎ ಸರ್ಕಾರ ಕಾಶ್ಮೀರದ ಜನತೆಗೆ ಶಾಂತಿ ಒದಗಿಸುವ ಪ್ರಯತ್ನ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.