ಪ.ಬಂಗಾಳ ಚುನಾವಣೆ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟೀಸ್
ನವದೆಹಲಿ: ಪಶ್ಚಿಮ ಬಂಗಾಳದ ಪಂಚಾಯತ್ ಚುನಾವಣೆಗೆ ಭದ್ರತಾ ಸಿಬ್ಬಂದಿಗಳನ್ನೋದಗಿಸುವ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬುಧವಾರ ನೋಟೀಸ್ ನೀಡಿದೆ.
ರಾಜ್ಯದಲ್ಲಿ ನಡೆಯಲಿರುವ ಪಂಚಾಯತ್ ಚುನಾವಣೆಗಾಗಿ ಹೆಚ್ಚಿನ ಭದ್ರತಾ ಸಿಬ್ಬಂದಿಗಳನ್ನು ಒದಗಿಸುವಂತೆ ರಾಜ್ಯ ಚುನಾವಣಾ ಆಯೋಗ ಮನವಿ ಸಲ್ಲಿಸಿತ್ತು. ಆದರೆ ಇದಕ್ಕೆ ರಾಜ್ಯ ಸರ್ಕಾರ ನಿರಾಕರಿಸಿದ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಸುಪ್ರೀಂ ಮೆಟ್ಟಿಲೇರಿತ್ತು.
ವಿಚಾರಣೆ ನಡೆಸಿದ ನ್ಯಾಯಾಮೂರ್ತಿಗಳಾದ ಎ.ಕೆ.ಪಟ್ನಾನಾಯಕ್ ಮತ್ತು ರಾಜನ್ ಗೊಗಯ್ ಅವರನ್ನೋಳಗೊಂಡ ನ್ಯಾಯಪೀಠ ಭದ್ರತಾ ಸಿಬ್ಬಂದಿಗಳನ್ನೋದಗಿಸುವ ಸಂಬಂಧ ಸ್ಪಷ್ಟೀಕರಣ ನೀಡಿ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರ ನೋಟೀಸ್ ನೀಡಿದೆ.
ಜುಲೈ 2ರೊಳಗೆ ನೋಟೀಸ್ಗೆ ಉತ್ತರಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.
ಪಂಚಾಯತ್ ಚುನಾವಣೆ ನಡೆಯುವ ಸಂದರ್ಭದಲ್ಲಿ ಹೆಚ್ಚಿನ ಮಟ್ಟಿಗೆ ಗಲಭೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಚುನಾವಣಾ ಆಯೋಗಕ್ಕೆ ಹೆಚ್ಚಿನ ಭದ್ರತಾ ಸಿಬ್ಬಂದಿ ಒದಗಿಸಬೇಕೆಂದು ಮನವಿ ಮಾಡಿತ್ತು.
ಆಯೋಗಕ್ಕೆ ಸುಮಾರು 2,41,000 ಭದ್ರತಾ ಸಿಬ್ಬಂದಿಗಳು ಬೇಕಾಗಿದ್ದಾರೆ. ಇದರಲ್ಲಿ 1,40,000 ರಷ್ಟು ಶಸಸ್ತ್ರ ಪಡೆಗಳು ಬೇಕಾಗಿದ್ದು, ಇನ್ನುಳಿದಂತೆ ಭದ್ರತಾ ಸಿಬ್ಬಂದಿಗಳು ಸಾಕು ಎಂದಿದೆ.
ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರಾಕರಿಸಿತ್ತು. ಈ ಸಂಬಂಧ ಆಯೋಗ, 800 ಭದ್ರತಾ ದಳಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಆದೇಶ ಹೊರಡಿಸಿ ಎಂದು ಕೊಲ್ಕತಾ ಹೈಕೋರ್ಟ್ಗೆ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿಯನ್ನು ತಿರಸ್ಕರಿಸಿತ್ತು.