ಬನಿಹಾಲ್-ಖಾಝಿಗುಂಡ್ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ
ಎಲ್ಲ ವಾತಾವರಣದಲ್ಲೂ ಕಾಶ್ಮೀರ ಕಣಿವೆಯನ್ನು ಸಂಪರ್ಕಿಸುವ ರೇಲ್ವೆ ಮಾರ್ಗವನ್ನು ಪ್ರಧಾನಮಂತ್ರಿ ಮನಮೋಹನ್..
ಶ್ರೀನಗರ: ಎಲ್ಲ ವಾತಾವರಣದಲ್ಲೂ ಕಾಶ್ಮೀರ ಕಣಿವೆಯನ್ನು ಸಂಪರ್ಕಿಸುವ ರೇಲ್ವೆ ಮಾರ್ಗವನ್ನು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಯುಪಿಎ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಬುಧವಾರ ಉದ್ಘಾಟಿಸಿದರು.
ರೇಲ್ವೆ ಮಾರ್ಗವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ, ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದರು. ಜಮ್ಮು ಮತ್ತು ಕಾಶ್ಮೀರ ಭೇಟಿಯ ಎರಡನೇ ಹಾಗೂ ಕೊನೆಯ ದಿನವಾದ ಇಂದು ಕಾಶ್ಮೀರ ಕಣಿಯನ್ನು ಸಂಪರ್ಕಿಸುವ ಬನ್ನಿಹಾಲ್ ಮತ್ತು ಖಾಝಿಗುಂಡ್ ರೈಲು ಮಾರ್ಗವನ್ನು ಸಂಚಾರ ಮುಕ್ತಗೊಳಿಸಿದರು.
ಈ ವೇಳೆ ರೇಲ್ವೆ ಇಲಾಖೆಯ ಸಿಬ್ಬಂದಿಯನ್ನು ಹಾಗೂ ಜಮ್ಮ ಮತ್ತು ಕಾಶ್ಮೀರದ ಜನತೆಯನ್ನು ಅಭಿನಂದಿಸಿದ ಪ್ರಧಾನಿ, ಕಾಶ್ಮೀರದ ಅಭಿವೃದ್ಧಿಗೆ ಈ ರೈಲು ಮಾರ್ಗ ಸಹಕಾರಿಯಾಗಲಿದೆ ಎಂದರು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ರಾಜ್ಯದ ಸರ್ವಾಂಗಿಣ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಅಭಿನಂದಿಸಿದರು.