ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಖಚಿತ ಪಡಿಸಿದ ವರದಿ

ಮಣಿಪಾಲ ವಿವಿಯ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ನಿಜ ಎಂಬುದು..

Lingaraj Badiger
Updated On : 26 Jun 2013, 5:07 am

ಉಡುಪಿ: ಮಣಿಪಾಲ ವಿವಿಯ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ನಿಜ ಎಂಬುದು ಬುಧವಾರ ವೈದ್ಯಕೀಯ ವರದಿಯಿಂದ ಸ್ಪಷ್ಟವಾಗಿದೆ.

ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರದ ಕುರಿತು ಉಡುಪಿಯ ಕೆಎಂಸಿ ಆಸ್ಪತ್ರೆ ಇಂದು ವರದಿ ನೀಡಿದ್ದು, ವರದಿಯಿಂದ ಅತ್ಯಾಚಾರ ನಡೆದಿರುವುದು ಖಚಿತವಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ಪ್ರತಾಪ್ ರೆಡ್ಡಿ ಅವರು ಹೇಳಿದ್ದಾರೆ.

ಇನ್ನು ಅತ್ಯಾಚಾರ ಪ್ರಕರಣ ನಡೆದು ಒಂದು ವಾರ ಕಳೆದರೂ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾಗಿರುವ ಪೊಲೀಸರ ನೆರವಿಗೆ ಮಣಿಪಾಲ ವಿವಿ ಧಾವಿಸಿದ್ದು, ಆರೋಪಿಗಳ ಬಗ್ಗೆ ಸುಳಿವು ನೀಡಿದವರಿಗೆ ಹೆಚ್ಚುವರಿಯಾಗಿ 3 ಲಕ್ಷ ರುಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದೆ. ಈ ಮುಂಚೆ ಪೊಲೀಸ್ ಇಲಾಖೆ ಮಾಹಿತಿ ನೀಡಿದವರಿಗೆ 2 ಲಕ್ಷ ರುಪಾಯಿ ಘೋಷಿಸಿತ್ತು.

ಪ್ರಕರಣ ಸಂಬಂಧ ಮತ್ತೆ 20 ಮಂದಿಯನ್ನು ವಿಚಾರಣೆ ನಡೆಸಲಾಗಿದೆ ಎಂದು ಪ್ರತಾಪ್ ರೆಡ್ಡಿ ಅವರು ತಿಳಿಸಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿ ನೀಡಿರುವ ಮಾಹಿತಿಯಂತೆ ಪೊಲೀಸರು ಕಳೆದ ಸೋಮವಾರ ಮೂವರು ಆರೋಪಿಗಳ ರೇಖಾ ಚಿತ್ರ ರಚಿಸಿದ್ದರು. ಅವುಗಳ ಪೈಕಿ ಒಂದು ರೇಖಾ ಚಿತ್ರವು ಅತ್ಯಾಚಾರಿಗಳಲೊಬ್ಬನಿಗೆ ಸಾಮ್ಯತೆ ಇರುವುದನ್ನು ಆಕೆ ಒಪ್ಪಿಕೊಂಡಿದ್ದಳು. ಪೊಲೀಸರು ವಿಶೇಷ ತಂಡವೊಂದನ್ನು ರಚಿಸಿ ಈ ರೇಖಾಚಿತ್ರದ ಆಧಾರದಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement