ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಕ್ಷಣಾ ಕಾರ್ಯ ಅಂತ್ಯ, ಮೃತದೇಹ ಪತ್ತೆ ಕಾರ್ಯ ಮುಂದುವರೆದಿದೆ: ಶಿಂಧೆ

ಉತ್ತರಾಖಂಡದಲ್ಲಿ ಪ್ರವಾಹ ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆ ಅಂತ್ಯವಾಗಿದೆ. ಆದರೆ ಮೃತ ದೇಹಗಳ ಪತ್ತೆ..

Lingaraj Badiger
Updated On : 28 Jun 2013, 2:14 am

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಪ್ರವಾಹ ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆ ಅಂತ್ಯವಾಗಿದೆ. ಆದರೆ ಮೃತ ದೇಹಗಳ ಪತ್ತೆ ಕಾರ್ಯಾಚರಣೆ ಇನ್ನು ಮುಂದುವರೆದಿದೆ ಎಂದು ಕೇಂದ್ರ ಗೃಹ ಸಚಿವ ಶುಶಿಲ್ ಕುಮಾರ್ ಶಿಂಧೆ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್‌ನಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ವಾಯುಪಡೆ, ಐಟಿಬಿಪಿ ಹಾಗೂ ಎನ್‌ಡಿಆರ್‌ಎಫ್‌ನ ಎಲ್ಲ 20 ಯೋಧರಿಗೆ ಗೌರವ ವಂದನೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಶಿಂಧೆ, ಉತ್ತರಾಖಂಡದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ತರಲು ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡಿದೆ ಎಂದರು.

ರಕ್ಷಣಾ ತಂಡಗಳ ಮಧ್ಯೆ ಉತ್ತಮ ಸಹಕಾರವಿತ್ತು ಮತ್ತು ಹೆಚ್ಚು ಹೆಚ್ಚು ಜನರನ್ನು ರಕ್ಷಿಸಿ, ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದು ನಮ್ಮ ಮೊದಲ ಉದ್ದೇಶವಾಗಿತ್ತು. ಆ ಕೆಲಸವನ್ನು ನಾವು ಯಶಸ್ವಿಯಾಗಿ ಮಾಡಿದ್ದೇವೆ. ಈಗ ಭಗ್ನಾವಶೇಷಗಳಿಂದ ಮೃತ ದೇಹಗಳನ್ನು ಪತ್ತೆ ಹಚ್ಚುವ ಕಾರ್ಯ ಮಾಡಬೇಕಿದೆ ಎಂದು ಶಿಂಧೆ ಹೇಳಿದರು.

ಇದೇ ವೇಳೆ, ಇನ್ನು 15 ದಿನ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಸಂಪೂರ್ಣ ಮುಗಿಯುವವರೆಗೆ ವಾಯು ಪಡೆಯ ಹೆಲಿಕಾಪ್ಟರ್‌ಗಳಿಗೆ ಉತ್ತರಾಖಂಡದಲ್ಲಿಯೇ ಇರುವಂತೆ ಶಿಂಧೆ ಸೂಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement