ಸೂರ್ಯನೆಲ್ಲಿ ಪ್ರಕರಣ: ಕುರಿಯನ್ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾ
ಸೂರ್ಯನೆಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ರಾಜ್ಯಸಭಾ ಉಪಸಭಾಪತಿ ಪಿ.ಜೆ ಕುರಿಯನ್..
ಇಡುಕ್ಕಿ: ಸೂರ್ಯನೆಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ರಾಜ್ಯಸಭಾ ಉಪಸಭಾಪತಿ ಪಿ.ಜೆ ಕುರಿಯನ್ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಶನಿವಾರ ವಜಾಗೊಳಿಸಿದೆ.
ಸೂರ್ಯನೆಲ್ಲಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯು ಪಿ.ಜೆ ಕುರಿಯನ್ ವಿರುದ್ಧ ದೂರು ದಾಖಲಿಸಿದ್ದಳು. ಕುರಿಯನ್ ಅವರನ್ನು ಆರೋಪಿ ಎಂದು ಪರಿಗಣಿಸಿ ಹೆಚ್ಚಿನ ತನಿಖೆ ನಡೆಸಬೇಕು ಎಂದು ಕೋರಿ ಸೆಷನ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಳು.
ಇಂದು ವಿಚಾರಣೆ ನಡೆಸಿದ ಕೇರಳದ ತೊಡುಪುಜ್ಜಾ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ. ಸೂರ್ಯನೆಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾಗಿರುವ ಕುರಿಯನ್ ಅವರನ್ನು ಆರೋಪಿ ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
1996ರಲ್ಲಿ ಕೇರಳದ ಇದ್ದುಕ್ಕಿ ಜಿಲ್ಲೆಯಲ್ಲಿ 16 ವರ್ಷದ ಬಾಲಕಿ ಮೇಲೆ 40 ಆರೋಪಿಗಳು ಅತ್ಯಾಚಾರ ನಡೆಸಿದ್ದರು.