ಬಾಂಬ್ ಸ್ಫೋಟ: 15 ಸಾವು
ಪೇಶವಾರ್: ಬಾಂಬ್ ಸ್ಪೋಟಗೊಂಡ ಪರಿಣಾಮ ಪಾಕಿಸ್ತಾನದ ಭದ್ರತಾ ದಳದ ಸಿಬ್ಬಂದಿಗಳು ಸೇರಿದಂತೆ 15 ಜನರು ಮೃತಪಟ್ಟಿರುವ ಘಟನೆ ಪೇಶವಾರ್ನ ಈಶಾನ್ಯ ದಿಕ್ಕಿನಲ್ಲಿ ಭಾನುವಾರ ನಡೆದಿದೆ.
ಭದ್ರತಾ ಸಿಬ್ಬಂದಿಗಳನ್ನು ಗುರಿಯಾಗಿಸಿಟ್ಟುಕೊಂಡ ಉಗ್ರರು ಬಾಂಬ್ ಸ್ಪೋಟಿಸಿದ್ದು ಸಿಬ್ಬಂದಿಗಳು, ಮೂವರು ಮಕ್ಕಳು ಸೇರಿದಂತೆ 15 ಜನರು ಮೃತಪಟ್ಟಿದ್ದು, 25 ಜನರು ಗಾಯಗೊಂಡಿದ್ದಾರೆ.
ಬ್ರಿಟೀಷ್ ಪ್ರಧಾನಿ ಡೇವಿಡ್ ಕ್ಯಾಮೆರಾನ್ ಅವರು ಇಸ್ಲಾಮಾಬಾದ್ಗೆ ಭೇಟಿ ನೀಡಿದ ಹಿನ್ನಲೆಯಲ್ಲಿ ಉಗ್ರರು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಬ್ಬರು ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 20 ಜನರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೆಲವು ದಿನಗಳ ಹಿಂದೆಯೇ ಆ ಪ್ರದೇಶದಲ್ಲಿ ಉಗ್ರರು ಬಾಂಬ್ ಸ್ಫೋಟಿಸಲು ಯೋಜನೆ ರೂಪಿಸಿದ್ದ ಮಾಹಿತಿ ಬಂದ ಹಿನ್ನಲೆಯಲ್ಲಿ ಕೆಲವು ಉಗ್ರರನ್ನು ಬಂಧಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.