ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿ: ಉತ್ತರಾಖಂಡ ಸಿಎಂ
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಇನ್ನೂ ಭಾರಿ ಮಳೆಯಾಗುವು ಸಾಧ್ಯತೆಯಿರುವುದರಿಂದ ಸರ್ಕಾರ ಭಕ್ತಾದಿಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿ ಎಂದು ಉನ್ನತ ಅಧಿಕಾರಿಗಳಿಗೆ ಭಾನುವಾರ ಸೂಚಿಸಿದೆ.
ಉತ್ತರಾಖಂಡಲ್ಲಿ ಭಾರಿ ಮಳೆಯಾಗುವು ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ.
ಭಕ್ತಾದಿಗಳು ಸುರಕ್ಷಿತ ರವಾನಿಸಿ ಹಾಗೂ ಚಾರ್ ಧಮ್ ಯಾತ್ರೆಯನ್ನು ಸ್ಥಗಿತಗೊಳಿಸಿ ಎಂದು ಹವಾಮಾನ ಇಲಾಖೆ ಉನ್ನತ ಅಧಿಕಾರಿಗಳಿಗೆ ಪತ್ರ ಬರೆದಿದೆ.
ಈಗಾಗಲೇ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮುನ್ಸೂಚನೆ ನೀಡಲಾಗುತ್ತಿದೆ. ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬರುತ್ತಿಲ್ಲ ಎಂದು ಹವಾಮಾನ ಇಲಾಖೆ ನಿರ್ದೇಶಕ ಆನಂದ್ ಶರ್ಮಾ ಹೇಳಿದ್ದಾರೆ.
ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆದರೆ ಲಕ್ಷಾರು ಸಂತ್ರಸ್ತರು ಇಲ್ಲಿರುವುದರಿಂದ ಅವರನ್ನು ರವಾನಿಸಲು ಸಮಯ ಬೇಕಾಗುತ್ತದೆ. ಹವಾಮಾನದ ವೈಪರೀತ್ಯವು ಕಾರ್ಯಚರಣೆಗೆ ಅಡ್ಡಿಯಾಗಿದೆ ಎಂದು ವಿಪತ್ತು ನಿರ್ವಹಣಾ ಸಚಿವ ಯಶ್ಪಾಲ್ ಆರ್ಯ ತಿಳಿಸಿದ್ದಾರೆ.