ಅಪಘಾತಕ್ಕೀಡಾಗಿರುವ ಆಮ್ ಆದ್ಮಿ ಪಕ್ಷದ ನಾಯಕಿ ಸ್ಥಿತಿ ಗಂಭೀರ
ಭಾನುವಾರ ಬೈಕ್ ಅಪಘಾತಕ್ಕೊಳಗಾಗಿ ತೀವ್ರ ಗಾಯಗೊಂಡಿರುವ ಆಮ್ ಆದ್ಮಿ ಪಕ್ಷದ ನಾಯಕಿಯ ಸ್ಥಿತಿ ಗಂಭೀರವಾಗಿದೆ...
ಗಾಜಿಯಾಬಾದ್: ಭಾನುವಾರ ಬೈಕ್ ಅಪಘಾತಕ್ಕೊಳಗಾಗಿ ತೀವ್ರ ಗಾಯಗೊಂಡಿರುವ ಆಮ್ ಆದ್ಮಿ ಪಕ್ಷದ ನಾಯಕಿಯ ಸ್ಥಿತಿ ಗಂಭೀರವಾಗಿದೆ ಎಂದು ಬಲ್ಲಮೂಲಗಳು ವರದಿ ಮಾಡಿವೆ.
ದೆಹಲಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿರುವ ಕೋಲಿ ಅವರು ಭಾನುವಾರ ಮೊಟಾರ್ ಸೈಕಲ್ನಲ್ಲಿ ಆಗಮಿಸುತ್ತಿದ್ದ ವೇಳೆ ಕಾರೊಂದಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದರು.
ಕೋಲಿ ಅವರ ತಲೆಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಶಸ್ತ್ರ ಚಿಕಿತ್ಸೆಗೊಳಪಡಿಸಲಾಗಿದೆ.
ಕೋಲಿ ಅವರ ಅಪಘಾತದ ಬಗ್ಗೆ ಮಾತನಾಡಿದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಇದೊಂದು ಹತ್ಯಾ ಸಂಚು ಆಗಿರಬಹುದು ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ನಮಗೆ ಯಾವುದೇ ಸಾಕ್ಷ್ಯಗಳಿಲ್ಲ. ಆದಾಗ್ಯೂ, ಇದೊಂದು ಸಾಮಾನ್ಯ ಅಪಘಾತವಲ್ಲ, ಈ ಬಗ್ಗೆ ತನಿಖೆ ನಡೆಸಬೇಕು ಎಂದಿದ್ದಾರೆ.
ಈ ಘಟನೆಯ ಬಗ್ಗೆ ಕೇಜ್ರಿವಾಲ್, ಸೀಮಾಪುರಿ ಕ್ಷೇತ್ರದ ನಮ್ಮ ಅಭ್ಯರ್ಥಿಯಾಗಿರುವ ಸಂತೋಷ್ ಕೋಲಿ ಅಪಘಾತಕ್ಕೀಡಾಗಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ. ಜನರು ಅವಳಿಗಾಗಿ ಪ್ರಾರ್ಥಿಸಬೇಕು...ಇದೊಂದು ಅಪಘಾತವೇ? ಅಥವಾ ಪೂರ್ವನಿಯೋಜಿತವೇ?ಎಂದು ಭಾನುವಾರ ಟ್ವೀಟ್ ಮಾಡಿದ್ದರು.
ಕುಲ್ದೀಪ್ ಅವರೊಂದಿಗೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಬೈಕ್ ಬೆಂಕಿಗಾಹುತಿಯಾಗಿದೆ. ಡಿಕ್ಕಿ ಹೊಡೆದ ಕಾರಿನ ಚಾಲಕ ಪರಾರಿಯಾಗಿದ್ದು, ಆತನ ವಿರುದ್ಧ ಕೇಸು ದಾಖಲಿಸಲಾಗಿದೆ.