ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಉತ್ತರಾಖಂಡ: ಪುನರ್ವಸತಿ ಕಾರ್ಯ ಆರಂಭ

ಪ್ರಳಯ ಪೀಡಿತ ಉತ್ತರಾಖಂಡದಲ್ಲಿ ಇದೀಗ ರಕ್ಷಣಾ ಕಾರ್ಯಾಚರಣೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಇನ್ಮುಂದೆ ಪುನರ್ವಸತಿ...

Rashmi Kasaragodu
Updated On : 1 Jul 2013, 4:47 am

ಡೆಹ್ರಾಡೂನ್: ಪ್ರಳಯ ಪೀಡಿತ ಉತ್ತರಾಖಂಡದಲ್ಲಿ ಇದೀಗ ರಕ್ಷಣಾ ಕಾರ್ಯಾಚರಣೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಇನ್ಮುಂದೆ ಪುನರ್ವಸತಿ ಕಾರ್ಯಗಳತ್ತ ಹೆಚ್ಚಿನ ಗಮನ ಹರಿಸುವುದಾಗಿ ಉತ್ತರಾಖಂಡ ರಾಜ್ಯ ಸರ್ಕಾರ ಹೇಳಿದೆ.

ಬಲ್ಲಮೂಲಗಳ ಪ್ರಕಾರ ಉತ್ತರಾಖಂಡ ಸಿಎಂ ವಿಜಯ್ ಬಹುಗುಣ ಅವರು  ಉತ್ತರಾಖಂಡ ಪುನರ್ವಸತಿ ಮತ್ತು ಪುನರ್‌ನಿರ್ಮಾಣ ಸಮಿತಿಯೊಂದನ್ನು ರಚಿಸಿದ್ದಾರೆ. ಆ ಸಮಿತಿಯು ಪ್ರಳಯ ಪೀಡಿತ ಪ್ರದೇಶದಲ್ಲಿನ ಜನರಿಗೆ ಪುನರ್ವಸತಿ  ಸೌಕರ್ಯ ಕಲ್ಪಿಸುವ ಕಾರ್ಯವನ್ನು ಮಾಡಲಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಹುಗುಣ ಅವರು, ಕಬ್ಬು ಬೆಳೆಗಾರರಿಗೆ ಹೆಚ್ಚಿನ ಪರಿಹಾರ ಧನವನ್ನು ನೀಡಲಾಗುವುದು ಎಂದು ಹೇಳಿದ್ದಾರೆ. ಅದೇ ವೇಳೆ ಪ್ರಳಯ ಪೀಡಿತ ಪ್ರದೇಶದ ವಿದ್ಯಾರ್ಥಿಗಳಿಗೆ ತಲಾ 500 ರು. ನೀಡಲಾಗುವುದು ಎಂದು ಹೇಳಿದ್ದಾರೆ.

ಇದೀಗ ರಾಜ್ಯದಲ್ಲಿ ಹರಿಯುತ್ತಿರುವ ನದಿ ದಂಡೆಗಳಲ್ಲಿ ಯಾವುದೇ ರೀತಿಯ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುವುದಕ್ಕೆ ಸರ್ಕಾರ ನಿಷೇಧ ಹೇರಿದೆ.

ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಉಚಿತ ಪಡಿತರ ನೀಡುವುದಾಗಿ ಹೇಳಿದ ಸಿಎಂ, ತುರ್ತಾಗಿ ಪುರರ್ವಸತಿ ಸೇವೆ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement