ಅಪ್ರಾಪ್ತೆ ಅತ್ಯಾಚಾರ: 200 ಜನರನ್ನು ವಿಚಾರಣೆಗೊಳಪಡಿಸುವ ಸಾಧ್ಯತೆ
ನವದೆಹಲಿ: ಸರ್ಕಾರಿ ಶಾಲೆಯಲ್ಲಿ ಬಾಲಕಿ ಮೇಲೆ ನಡೆಸಿದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 200 ಜನರನ್ನು ಪೊಲೀಸರು ಭಾನುವಾರ ವಿಚಾರಣೆಗೊಳಪಡಿಸಲಿದ್ದಾರೆ.
ಶನಿವಾರ ಉಪಆಯುಕ್ತ ಬಿ.ಎಸ್ ಜೈಸ್‌ವಾಲ್ ಅವರು ಮಾತನಾಡಿ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದು, ಸುಮಾರು 200ಜನರನ್ನು ನಾಳೆ ವಿಚಾರಣೆಗೊಳಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
ದೆಹಲಿಯ ಸರ್ಕಾರಿ ಶಾಲೆಯೊಂದರಲ್ಲಿ 7 ವರ್ಷದ ಬಾಲಿಕಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾನೆ. ಬಾಲಿಕಿಯನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಈಗಾಗಲೇ ತನಿಖೆ ಆರಂಭಿಸಿರುವ ಪೊಲೀಸರು ಬಾಲಕಿಯ ಹೇಳಿಕೆಯನ್ನು ಪಡೆದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಶಾಲೆಯ ಸಿಬ್ಬಂದಿ, ಶಿಕ್ಷಕರು ಸೇರಿದಂತೆ ಇತರೆ ವ್ಯಕ್ತಿಗಳನ್ನು ನಾಳೆ ವಿಚಾರಣೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.