ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ತುಮಕೂರು ಜಿಲ್ಲೆಯ ತುರುವೇಕೆರೆಯ ಹಳ್ಳದ ಹೊಸಹಳ್ಳಿಯಲ್ಲಿ ಸಾಲ ಬಾಧೆಯಿಂದ ಒಂದೇ ಕುಟುಂಬದ ನಾಲ್ವರು...
ತುಮಕೂರು: ಜಿಲ್ಲೆಯ ತುರುವೇಕೆರೆಯ ಹಳ್ಳದ ಹೊಸಹಳ್ಳಿಯಲ್ಲಿ ಸಾಲ ಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಶನಿವಾರ ನಡೆದಿದೆ.
ಹಳ್ಳದ ಹೊಸಳ್ಳಿ ಗ್ರಾಮದ ಬೋರೇಗೌಡ(50) ಅವರು ತಮ್ಮ ತಾಯಿ ಲಕ್ಷ್ಮಮ್ಮ(65) ಹಾಗೂ ತಮ್ಮ ಇಬ್ಬರು ಮಕ್ಕಳಾದ ಸ್ವರೂಪ(18), ಸ್ಪಪ್ನ (15)ರೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಕಡುಬಡವರಾಗಿದ್ದು, ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದರು ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.