ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಜನಸಂಖ್ಯೆ ಹೆಚ್ಚಳದಿಂದ ಆರ್ಥಿಕತೆ ಕುಗ್ಗಲಿದೆ: ನಿತೀಶ್

Mainashree
Updated On : 2 Mar 2013, 5:57 am

ಪಾಟ್ನಾ: ಬಿಹಾರದಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಹೀಗೆ ಮುಂದುವರೆದರೆ ರಾಜ್ಯದ ಆರ್ಥಿಕತೆ ಕುಗ್ಗಲಿದೆ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್‌ಕುಮಾರ್ ಶನಿವಾರ ಹೇಳಿದ್ದಾರೆ.

ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಆರ್ಥಿಕತೆ ಬೆಳವಣಿಗೆಗೆ ಧಕ್ಕೆ ಉಂಟಾಗಲಿದೆ. ಇದರಿಂದ ರಾಜ್ಯದ ಜನತೆ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಈಗಿನ ಜನಸಂಖ್ಯಾ ಆಧರಿಸಿ ನೋಡಿದರೆ 2051 ರಷ್ಟರಲ್ಲಿ ರಾಜ್ಯದ ಜನಸಂಖ್ಯೆ ಎರಡು ಪಟ್ಟು ಹೆಚ್ಚಾಗಲಿದೆ ಎಂದು ಅಂಧಾಜಿಸಲಾಗಿದೆ. ಇದರಿಂದಾಗಿ ಮೂಲಭೂತ ಸೌಕರ್ಯ, ಸಂಪನ್ಮೂಲ ಮತ್ತು ನೆಲೆಯ ಕೊರತೆ ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ.

ಈ ಸಂಬಂಧ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದ್ದು, ಜನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಹಿಳೆಯರಿಗೆ ಶಿಕ್ಷಣದ ಕೊರತೆಯಿರುವುದೂ ಜನಸಂಖ್ಯೆ ಹೆಚ್ಚಳಕ್ಕೆ ಕಾರಣ. ಆದ್ದರಿಂದ ರಾಜ್ಯದಲ್ಲಿ ಮಹಿಳಾ ಶಿಕ್ಷಣದ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement