ಭಯೋತ್ಪಾದನೆ ತಡೆಯಲು ಕೇಂದ್ರ ಸರ್ಕಾರ ವಿಫಲ: ಬಿಜೆಪಿ ಆರೋಪ
ನವದೆಹಲಿ: ಯುಪಿಎ ಸರ್ಕಾರ ಭಯೋತ್ಪಾದನಾ ನಿಗ್ರಹಕ್ಕೆ ನಾಯಕತ್ವ ಕೊಡುವಲ್ಲಿ ವಿಫಲವಾಗಿದೆ ಎಂದು ಭಾರತೀಯ ಜನತಾ ಪಕ್ಷಾ(ಬಿಜೆಪಿ) ಶನಿವಾರ ಆರೋಪಿಸಿದೆ.
ರಾಷ್ಟೀಯ ಭಯೋತ್ಪಾದನಾ ನಿಗ್ರಹ ಕೇಂದ್ರ (ಎನ್‌ಸಿಟಿಸಿ) ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ, ಭಯೋತ್ಪಾದನೆ ನಿಗ್ರಹಕ್ಕೆ ನಾಯಕತ್ವ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆಪಾದಿಸಿದ್ದಾರೆ.
ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಹೈದ್ರಾಬಾದ್ ಸ್ಫೋಟದಲ್ಲಿ ಮಣಿದವರಿಗೆ ಸಂತಾಪ ಸೂಚಿಸಿ ಮಾತನಾಡಿದ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು, ಯುಪಿಎ ಆಡಳಿತದಲ್ಲಿ ನಾವು ಭಯೋತ್ಪಾದನೆಯನ್ನು ನಿಗ್ರಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಯುಪಿಎ ಸರ್ಕಾರ ಭಯೋತ್ಪಾದನೆ ವಿರುದ್ಧ ಹೋರಾಡುವ ಕಾಯ್ದೆ ರಚಿಸಿದರೆ ಅದಕ್ಕೆ ಬಿಜೆಪಿಯ ಸಂಪೂರ್ಣ ಬೆಂಬಲಿವಿದೆ ಎಂದು ಅವರು ತಿಳಿಸಿದ್ದಾರೆ.