ಮಳೆ ಬಂತು.. ಗಾಳಿ ಹೋಯ್ತು.. ಪೂಜಾ ಇನ್, ರಕ್ಷಿತಾ ಔಟ್?
ಮಳೆ ಹುಡುಗಿ ಪೂಜಾ ಗಾಂಧಿ ಅವರು ಬಿಎಸ್‌ಆರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದರ ಬಗ್ಗೆ ಬಿಎಸ್‌ಆರ್ ಕಾಂಗ್ರೆಸ್ ನಾಯಕಿ ಹಾಗೂ..
ಬೆಂಗಳೂರು: ಮಳೆ ಹುಡುಗಿ ಪೂಜಾ ಗಾಂಧಿ ಅವರು ಬಿಎಸ್‌ಆರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದರ ಬಗ್ಗೆ ಬಿಎಸ್‌ಆರ್ ಕಾಂಗ್ರೆಸ್ ನಾಯಕಿ ಹಾಗೂ ಸಂಟರಗಾಳಿ ರಕ್ಷಿತಾ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪೂಜಾ ಸೇರ್ಪಡೆಯಿಂದ ಬೇಸರಗೊಂಡಿರುವ ರಕ್ಷಿತಾ ಈಗ ಬಿಎಸ್‌ಆರ್ ಪಕ್ಷ ತೊರೆದು ಬಿಜೆಪಿ ಸೇರಲು ಚಿಂತನೆ ನಡೆಸಿದ್ದಾರೆ. ಈ ಸಂಬಂಧ ಎರಡು ದಿನಗಳ ಹಿಂದೆಯೇ ರಕ್ಷಿತಾ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ರಾಜಾಜಿನಗರದಿಂದ ಸ್ಪರ್ಧಿಸಲು ರಕ್ಷಿತಾ ಉತ್ಸುಕರಾಗಿದ್ದು, ಬಿಜೆಪ ಟಿಕೆಟ್ ಗಿಟ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನು ಬಿಎಸ್‌ಆರ್ ಕಾಂಗ್ರೆಸ್ ಸೇರಲು ನಿರ್ಧರಿಸಿರುವ ಪೂಜಾ ಗಾಂಧಿ ಇಂದು ಕೆಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ನಾಳೆ ಅಧಿಕೃತವಾಗಿ ಬಿಎಸ್‌ಆರ್ ಕಾಂಗ್ರೆಸ್ ಸೇರಲಿದ್ದಾರೆ.