ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

"ಹೈ" ಅವಳಿ ಸ್ಫೋಟ: ಕರ್ನಾಟಕ ಮೂಲದ 3 ಶಂಕಿತರು ಎನ್ಐಎ ವಶಕ್ಕೆ

ಅವಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಕರ್ನಾಟಕ ಮೂಲದ ಮೂವರು ಶಂಕಿತರನ್ನು ವಶಕ್ಕೆ ಪಡೆದುಕೊಂಡಿದೆ.

Srinivasa Murthy VN
Updated On : 4 Mar 2013, 6:21 am

ಹೈದರಾಬಾದ್: ಹೈದರಾಬಾದಿನಲ್ಲಿ ನಡೆದ ಅವಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಕರ್ನಾಟಕ ಮೂಲದ ಮುವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದುಕೊಂಡಿದೆ.

ಹೈದರಾಬಾದಿನ ಬೇಗಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರನ್ನು ಬೇಗಂಪೇಟೆ ಪೊಲೀಸರು ವಶಪಡಿಸಿಕೊಂಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಎನ್ಐಎ ಅಧಿಕಾರಿಗಳು, ಶಂಕಿತರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಬೇಗಂಪೇಟೆಯ ಎನ್ಐಎ ಕಚೇರಿಗೆ ಕರೆದೊಯ್ದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಶಂಕಿತರನ್ನು ಕರ್ನಾಟಕದ ಬೀದರ್ ಜಿಲ್ಲೆಯ ಅಬ್ದುಲ್ ಗಫಾರ್, ಸೈಯ್ಯದ್ ಖಾನ್, ಮುದನಾರ್ ಎಂದು ಗುರುತಿಸಲಾಗಿದೆ. ಕಳೆದ ಫೆಬ್ರವರಿಯಲ್ಲಿ ಹೈದರಾಬಾದಿನ ದಿಲ್ಸುಖ್ ನಗರದಲ್ಲಿ ಸಂಭವಿಸಿದ ಅವಳಿ ಸ್ಫೋಟದಿಂದಾಗಿ 19 ಜನರು ಸಾವಿಗೀಡಾಗಿ, ಸುಮಾರು 45 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ಸ್ಫೋಟ ಪ್ರಕರಣ ಸಂಬಂಧ ಈ ವರೆಗೂ 8 ಮಂದಿ ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ ಮತ್ತು ಹೈದರಾಬಾದ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement