ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಹಿರಿಯ ನಟಿ ರಾಜಸುಲೋಚನಾ ನಿಧನ

ನಟಿ ರಾಜಸುಲೋಚನಾ
Parashurama
Updated On : 5 Mar 2013, 4:49 am

ಚೆನೈ: ದಕ್ಷಿಣ ಭಾರತದ ಖ್ಯಾತ ಹಿರಿಯ ನಟಿ ಹಾಗೂ ನೃತ್ಯಗಾರ್ತಿ ರಾಜಸುಲೋಚನಾ ಅವರು ಮಂಗಳವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಿಧನರಾದರು.

ಸುಲೋಚನಾ ಅವರು ಕಳೆದ ಐದು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಉಸಿರಾಟದ ತೊಂದರೆ ತೀವ್ರವಾದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ವಿಧವಶರಾಗಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಸುಲೋಚನಾ ಅವರಿಗೆ 77 ವರ್ಷ ವಯಸ್ಸಾಗಿತ್ತು, ಅವರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

1953ರಲ್ಲಿ ಕನ್ನಡದಲ್ಲಿ ಗುಣಸಾಗರಿ ಎಂಬ ಚಿತ್ರದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು. ಇಲ್ಲಿಯವರೆಗೆ ಇವರು ಕನ್ನಡ, ತಮಿಳು, ತೆಲಗು ಚಿತ್ರರಂಗದಲ್ಲಿ 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

ನೃತ್ಯದಲ್ಲಿ ಆಸಕ್ತಿ ಇದ್ದುದರಿಂದ ಇವರು 1961ರಲ್ಲಿ ಪುಷ್ಪಾಂಜಲಿ ನೃತ್ಯ ಕಲಾ ಕೇಂದ್ರ ಎಂಬ ಕಲಾ ಶಾಲೆಯನ್ನು ಆರಂಭಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments