ಹೈ ಕಮಾಂಡ್ ಸಂಸ್ಕೃತಿಗೆ ರಾಹುಲ್ ವಿರೋಧ
ಕಾಂಗ್ರೆಸ್ ನಲ್ಲಿ ಹೈ ಕಮಾಂಡ್ ಸಂಸ್ಕೃತಿಯನ್ನು ಮುಂದುವರೆಸುವುದಿಲ್ಲ ಎಂಬ ಸೂಚನೆಯನ್ನು ರಾಹುಲ್ ಗಾಂಧಿ ನೀಡಿದ್ದಾರೆ.
ನವದೆಹಲಿ: ನನ್ನನ್ನು ಪ್ರಧಾನಿ ಮಂತ್ರಿ ಆಗುತ್ತಿರಾ? ಎಂದು ಕೇಳುವ ಪ್ರಶ್ನೆಯೇ ತಪ್ಪು ಎಂದು ಹೇಳುವ ಮೂಲಕ ಹೈ ಕಮಾಂಡ್ ಸಂಸ್ಕೃತಿಯನ್ನು ಮುಂದುವರೆಸುವುದಿಲ್ಲ ಎಂಬ ಸೂಚನೆಯನ್ನು ರಾಹುಲ್ ಗಾಂಧಿ ನೀಡಿದ್ದಾರೆ.
ಪಕ್ಷದ ಕುರಿತು ಇಂದು ನವದೆಹಲಿಯಲ್ಲಿ ನಡೆದ ಸಂಸತ್ ಸದಸ್ಯರುಗಳ ಸಭೆಯಲ್ಲಿ ಮಾತನಾಡಿದ ಭಾವಿ ಪ್ರಧಾನಿಯೆಂದೇ ಬಿಂಬಿತವಾಗಿರುವ ರಾಹುಲ್ ಗಾಂಧಿ, ತನ್ನನ್ನು ಭವಿಷ್ಯದ ಪ್ರಧಾನಿ ಎಂದು ಬಿಂಬಿಸುವುದು ತಪ್ಪು ಹೇಳಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಕಾಂಗ್ರೆಸ್ ಪರೋಕ್ಷವಾಗಿ ಸೂಚಿಸಿದ್ದರೂ ರಾಹುಲ್ ಮಾತ್ರ ತಾನು ಪ್ರಧಾನಿ ಅಭ್ಯರ್ಥಿ ಅಲ್ಲ ಎಂದು ಹೇಳಿದ್ದಾರೆ.
42 ವರ್ಷದ ರಾಹುಲ್ ಗಾಂಧಿ ಸದ್ಯ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುತ್ತಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಲು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.