ಕೂಡಂಕುಲಂ ವಿರೋಧಿಸಿ ಶ್ರೀಲಂಕಾ ಪರಿಸರವಾದಿಗಳ ಪ್ರತಿಭಟನೆ
ಕೊಲಂಬೋ: ಭಾರತ ಸರ್ಕಾರ ತಮಿಳುನಾಡಿನ ಕೂಡಂಕುಲಂನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಅಣು ಸ್ಥಾವರವನ್ನು ವಿರೋಧಿಸಿ ಶ್ರೀಲಂಕಾದ ಪರಿಸರವಾದಿಗಳು ಕೊಲಂಬೋದಲ್ಲಿನ ಭಾರತೀಯ ರಾಯಭಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.
ಕೂಡಂಕುಲಂನಲ್ಲಿ ಅಣು ಸ್ಥಾವರ ಸ್ಥಾಪಿಸುವುದರಿಂದ ಲಕ್ಷಾಂತರ ಜೀವಿಗಳಿಗೆ ಹಾಗೂ ಪರಿಸರಕ್ಕೆ ಧಕ್ಕೆಯಾಗುತ್ತದೆ. ಈ ಯೋಜನೆಯನ್ನು ಭಾರತ ಸರ್ಕಾರ ಕೂಡಲೇ ಕೈ ಬೀಡಬೇಕೆಂದು ಆಗ್ರಹಿಸಿ ಭಾರಿ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಭಾರತೀಯ ರಾಯಭಾರಿ ಕಚೇರಿ ಮುಂದೆ ಪ್ರತಿಭಟಿಸಿದರು.
ಪ್ರತಿಭಟನಾ ನೇತೃತ್ವ ವಹಿಸಿದ ಪ್ರಸಾದ್ ಅಂಬಾಲಾನ್ಯ, ರಷ್ಯಾ ನಿರ್ಮಿತ ಕೂಡಂಕುಲಂ ಅಣುಸ್ಥಾವರ ಪರಿಸರಕ್ಕೆ ಮಾರಕವಾಗಿದ್ದು, ಈ ಯೋಜನೆಯಿಂದ ಭಾರತದಲ್ಲಿ ಅಷ್ಟೇ ಅಲ್ಲದೇ ಶ್ರೀಲಂಕಾದಲ್ಲಿಯೂ ಸಹ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದು ಹೇಳಿದರು.
ಈಗಾಗಲೇ ಕೂಡಂಕುಲಂನಲ್ಲಿ ಮೊದಲ ಹಂತದಲ್ಲಿ ಒಂದು ಘಟಕವನ್ನು ಸ್ಥಾಪಿಸಿದ್ದು, ಈ ಘಟಕ ವಿದ್ಯುತ್ ಉತ್ಪಾದಿಸುತ್ತಿದೆ. ಆದರೆ ಪ್ರತಿಭಟನೆಯಿಂದ ಎರಡನೇ ಘಟಕ ಸ್ಥಾಪನೆಗೆ ತೊಡಕುಂಟಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.