ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೆಜೆಪಿ ಅಧ್ಯಕ್ಷ ವಿವಾದ: ಬಿಎಸ್‌ವೈ, ಧನಂಜಯ್‌ಗೆ ಹೈ ನೋಟಿಸ್

ಕರ್ನಾಟಕ ಜನತಾ ಪಕ್ಷ ಅಧ್ಯಕ್ಷ ಸ್ಥಾನದ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ...

Parashurama
Updated On : 6 Mar 2013, 7:30 am

ಬೆಂಗಳೂರು: ಕರ್ನಾಟಕ ಜನತಾ ಪಕ್ಷ(ಕೆಜೆಪಿ) ಅಧ್ಯಕ್ಷ ಸ್ಥಾನದ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೆಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿ.ಧನಂಜಯ್ ಕುಮಾರ್ ಅವರಿಗೆ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.

ಚುನಾವಣಾ ಆಯೋಗ ಯಡಿಯೂರಪ್ಪ ಅವರನ್ನು ಕೆಜೆಪಿ ಅಧ್ಯಕ್ಷ ಎಂದು ಪ್ರಕಟಿಸಿರುವುದನ್ನು ಪ್ರಶ್ನಿಸಿ ಕೆಜೆಪಿ ಸಂಸ್ಥಾಪಕ ಪದ್ಮನಾಭ ಪ್ರಸನ್ನ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೋಹನ್ ಶಾಂತಗೌಡರ್ ಅವರಿದ್ದ ಏಕಸದಸ್ಯ ಪೀಠ, ಯಡಿಯೂರಪ್ಪ ಹಾಗೂ ಧನಂಜಯ್ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿ, ಪ್ರಕರಣದ ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿದೆ.

ಯಡಿಯೂರಪ್ಪ ಅವರು ಕಾನೂನು ಬಾಹಿರವಾಗಿ ತಾವೇ ಕೆಜೆಪಿ ಅಧ್ಯಕ್ಷ ಎಂದು ಘೋಷಿಸಿಕೊಂಡಿದ್ದಾರೆ ಎಂದು ಪದ್ಮನಾಭ ಪ್ರಸನ್ನ ಅವರು ಹೈಕೋರ್ಟ್‌ನಲ್ಲಿ ದೂರು ದಾಖಲಿಸಿದ್ದರು.

ಕಳೆದ ಡಿಸೆಂಬರ್ 9, 2012ರಂದು ಹಾವೇರಿಯಲ್ಲಿ ನಡೆದ ಕೆಜೆಪಿ ಸಮಾವೇಶದಲ್ಲಿ ಪದ್ಮನಾಭ್ ಪ್ರಸನ್ನ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಅಸ್ತಾಂತರಿಸಿದ್ದರು.

ಈ ಮಧ್ಯೆ, ಧನಂಜಯ್ ಕುಮಾರ್ ಅವರು ಪದ್ಮನಾಭ ಪ್ರಸನ್ನ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments