ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಚಂಡೀಗಢ: ಹಿಂಸಾಚಾರಕ್ಕೆ ತಿರುಗಿದ ವಕೀಲರ ಪ್ರತಿಭಟನೆ

ಹಿರಿಯ ವಕೀಲರ ಮೇಲೆ ಪೊಲೀಸರು ಹಾಕಿದ ಎಫ್‌ಐಆರ್ ರದ್ದುಗೊಳಿಸುವಂತೆ ಹಾಗೂ ತಮ್ಮ ಹಲವು ಬೇಡಿಕೆಗಳನ್ನು...

Parashurama
Updated On : 6 Mar 2013, 5:16 am

ಚಂಡೀಗಢ/ಜೈಪುರ: ಹಿರಿಯ ವಕೀಲರ ಮೇಲೆ ಪೊಲೀಸರು ಹಾಕಿದ ಎಫ್‌ಐಆರ್ ರದ್ದುಗೊಳಿಸುವಂತೆ ಹಾಗೂ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚಂಡೀಗಢ ಮತ್ತು ಜೈಪುರದಲ್ಲಿ ವಕೀಲರು ನಡೆಸುತ್ತಿರುವ ಪ್ರತಿಭಟನೆ ಬುಧವಾರ ಹಿಂಸಾಚಾರಕ್ಕೆ ತಿರುಗಿದೆ.

ವಕೀಲರಿಗೆ ಅಲ್ಪ ಹಣದಲ್ಲಿ ಸರ್ಕಾರಿ ಮನೆ ನೀಡಬೇಕು, ಹಿರಿಯ ವಕೀಲರ ಮೇಲೆ ಹಾಕಿದ ಎಫ್‌ಐಆರ್‌ನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ವಕೀಲರು ಇಂದು ಬೆಳಿಗ್ಗೆಯಿಂದ ರಾಜಸ್ಥಾನ ವಿಧಾನಸೌಧ ಹೊರಗೆ ಹಾಗೂ ಚಂಡೀಗಢ ರಾಜ್ಯಪಾಲರ ನಿವಾಸದ ಮುಂದೆ ಮೌನ ಪ್ರತಿಭಟನೆ ಮಾಡುತ್ತಿದ್ದರು.

ರಾಜ್ಯಪಾಲರ ನಿವಾಸದ ಬಳಿ ಸಾವಿರಾರು ವಕೀಲರು ಜಮಾಯಿಸಿದ್ದರಿಂದ ಪೊಲೀಸರು ವಕೀಲರನ್ನು ಸ್ಥಳದಿಂದ ತೆರವುಗೊಳಿಸಲು ಪ್ರಯತ್ನಿಸಿದ್ದರಿಂದ ಕುಪಿತಗೊಂಡ ವಕೀಲರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಪೊಲೀಸರು ವಕೀಲರ ಮೇಲೆ ಲಾಠಿ ಚಾರ್ಚ್ ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ವಕೀಲರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಜಲಫಿರಂಗಿ ಪ್ರಯೋಗಿಸಲಾಗಿದೆ. ಪೊಲೀಸರ ಹಾಗೂ ವಕೀಲರ ನಡುವೆ ಘರ್ಷಣೆ ಮುಂದುವರೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments