ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಮ್ಮ ಸಾಧನೆ ಉಪೇಕ್ಷಿಸಬೇಡಿ: ಬಿಜೆಪಿಗೆ ಪ್ರಧಾನಿ ತಿರುಗೇಟು

ಯುಪಿಎ ಸರ್ಕಾರದ ಸಾಧನೆ ಶೂನ್ಯ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಯಿಸಿದ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಬೇರೆ ಸರ್ಕಾರಗಳಿಗಿಂತ ಯುಪಿಎ ಸರ್ಕಾರದ ಆರ್ಥಿಕ ಸಾಧನೆ...

Parashurama
Updated On : 6 Mar 2013, 7:15 am

ನವದೆಹಲಿ: ಯುಪಿಎ ಸರ್ಕಾರದ ಸಾಧನೆ ಶೂನ್ಯ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಯಿಸಿದ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಬೇರೆ ಸರ್ಕಾರಗಳಿಗಿಂತ ಯುಪಿಎ ಸರ್ಕಾರದ ಆರ್ಥಿಕ ಸಾಧನೆ ಉತ್ತಮವಾಗಿದೆ ಎಂದು ಹೇಳಿದ್ದಾರೆ.

ಇಂದು ಲೋಕಸಭೆಯಲ್ಲಿ ಮಾತನಾಡಿದ ಸಿಂಗ್, ಬಿಜೆಪಿ ಪಕ್ಷ ಯುಪಿಎ ಸರ್ಕಾರದ ಮೇಲೆ ನಿಂದನಾತ್ಮಕ ಭಾಷೆ ಬಳಸಿ ಆರೋಪ ಮಾಡುತ್ತಿದೆ. ಬಿಜೆಪಿ ಸಂಸದರು ಬಳಸುವ ಭಾಷೆಯ ಮೇಲೆ ನಿಯಂತ್ರಣವಿಟ್ಟುಕೊಳ್ಳಲಿ ಎಂದು ಬಿಜೆಪಿಗೆ ಪ್ರಧಾನಿ ಸಿಂಗ್ ತಿರುಗೇಟು ನೀಡಿದ್ದಾರೆ. ನಾವು ಅದೇ ಭಾಷೆಯನ್ನು ಬಳಸಿ ಉತ್ತರಿಸುವುದಿಲ್ಲ ಎಂದು ಸಿಂಗ್ ಹೇಳಿದರು.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣಕ್ಕೆ ವಂದನೆ ಸಲ್ಲಿಸುತ್ತಾ ಮಾತನಾಡಿದ ಸಿಂಗ್, ಯುಪಿಎ ಸರ್ಕಾರದ ಆರ್ಥಿಕ ನೀತಿ ಹಾಗೂ ಸಾಧನೆ ಉತ್ತಮವಾಗಿದ್ದು, ಯಾವ ಸರ್ಕಾರಗಳು ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಮಾಡಿದೆ ಎಂದು ಹೇಳಿದರು.

ಬೇರೆ ದೇಶಗಳಿಂತ ಭಾರತ ಆರ್ಥಿಕ ಸ್ಥಿತಿ ಉತ್ತಮವಾಗಿದ್ದು, ಶೇ. 8ರಷ್ಟು ಬೆಳವಣಿಗೆ ಸಾಧಿಸಲು ನಾವು ಸಾಕಷ್ಟು ಪ್ರಯತ್ನಿಸುತ್ತಿದ್ದೆವೆ ಎಂದು ಪ್ರಧಾನಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments