ಕ್ರಿಕೆಟ್ ಜೀವನ ಇಲ್ಲಿಗೆ ಮುಗಿದಿಲ್ಲ, ಮತ್ತೆ ಬರುತ್ತೇನೆ: ಸೆಹ್ವಾಗ್
ಆಸ್ಟ್ರೇಲಿಯಾ ವಿರುದ್ಧದ 3,4ನೇ ಟೆಸ್ಟ್ ಪಂದ್ಯದಿಂದ ಕೈ ಬಿಟ್ಟಿದ್ದಕ್ಕೆ ಪ್ರತಿಕ್ರಿಯಿಸಿರುವ ವೀರೇಂದ್ರ ಸೆಹ್ವಾಗ್...
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ 3,4ನೇ ಟೆಸ್ಟ್ ಪಂದ್ಯದಿಂದ ಕೈ ಬಿಟ್ಟಿದ್ದಕ್ಕೆ ಪ್ರತಿಕ್ರಿಯಿಸಿರುವ ವೀರೇಂದ್ರ ಸೆಹ್ವಾಗ್, ನನ್ನ ಶಕ್ತಿ ಇನ್ನು ಕುಂದಿಲ್ಲ. ಲಯ ಕಂಡುಕೊಳ್ಳುವ ಮೂಲಕ ಮತ್ತೆ ತಂಡಕ್ಕೆ ಮರಳುತ್ತೇನೆ ಎಂದು ಗುರುವಾರ ತಿಳಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಆಡಬೇಕೆಂದು ಎಲ್ಲಾ ಆಟಗಾರರು ಹವಣಿಸುತ್ತಿರುತ್ತಾರೆ. ಕಳಪೆ ಪ್ರದರ್ಶನದ ಕಾರಣ ನೀಡಿ ನನ್ನನ್ನು ತಂಡದಿಂದ ಕೈ ಬಿಟ್ಟಿರುವುದು ನೋವಾಗಿದೆ ಎಂದು ಸೆಹ್ವಾಗ್ ಹೇಳಿದ್ದಾರೆ. ತಂಡದಿಂದ ನನ್ನನ್ನು ಕೈ ಬಿಟ್ಟ ಮಾತ್ರಕ್ಕೆ ನನ್ನ ಕ್ರಿಕೆಟ್ ಜೀವನ ಮುಗಿಯುವುದಿಲ್ಲ, ಆದಷ್ಟು ಬೇಗ ಉತ್ತಮ ಲಯ ಕಂಡುಕೊಳ್ಳುವ ಮೂಲಕ ತಂಡಕ್ಕೆ ಮರಳುತ್ತೆನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸದ್ಯ ತಮ್ಮಿಂದ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ ಸೆಹ್ವಾಗ್ ಅವರ ಟೆಸ್ಟ್ ಕ್ರಿಕೆಟ್ ಜೀವನ ಮುಗಿಯಿತು ಎಂದು ಮಾತನಾಡಿಕೊಳ್ಳುವುದು ಬೇಡ. ಸದ್ಯಕ್ಕೆ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದುವ ವಿಚಾರ ನನ್ನ ಮುಂದಿಲ್ಲ ಎಂದು ಹೇಳಿದರು.
ಕಳೆದ ಎರಡು ವರ್ಷಗಳಿಂದ ಸೆಹ್ವಾಗ್ ಟೆಸ್ಟ್ ಕ್ರಿಕೆಟ್ನಲ್ಲಿ ಕಳಪೆ ಪ್ರದರ್ಶನ ತೋರುತ್ತಿದ್ದರು. ಇದರಿಂದ ಆಯ್ಕೆ ಸಮಿತಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ 3,4ನೇ ಟೆಸ್ಟ್ ಪಂದ್ಯದಿಂದ ಕೈ ಬಿಟ್ಟಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.