ಪುಟ್ಟಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು
ರು. 50 ಕೋಟಿ ಸಾಲ ಪಡೆದು ಮರುಪಾವತಿ ಮಾಡದೇ ವಂಚಿಸುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಸಹಕಾರ ಸಚಿವ...
ಬೆಂಗಳೂರು: ರು. 50 ಕೋಟಿ ಸಾಲ ಪಡೆದು ಮರುಪಾವತಿ ಮಾಡದೆ ವಂಚಿಸುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ಅವರ ವಿರುದ್ಧ ಜನ್ನದೇವರಾಜ್ ಎಂಬುವರು ಗುರುವಾರ ಲೋಕಾಯುಕ್ತ ಕೋರ್ಟ್ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆಪ್ತರಾದ ಪುಟ್ಟಸ್ವಾಮಿ, ಕೆಎಸ್ಎಫ್ಸಿ, ಕೆಎಸ್ಐಐಡಿಸಿಯಿಂದ ರು. 50 ಕೋಟಿ ಸಾಲ ಪಡೆದು ಮರುಪಾವತಿಸದೆ ವಂಚಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಾಲದ ಬಡ್ಡಿಯನ್ನು ಇಲ್ಲಿಯವರೆಗೆ ಪುಟ್ಟಸ್ವಾಮಿಯವರು ನೀಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಿಎಸ್ವೈ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರ ಪ್ರಭಾವ ಬಳಿಸಿಕೊಂಡು ಪುಟ್ಟಸ್ವಾಮಿ ಅವರು ಕೆಎಸ್ಎಫ್ಸಿ ಮತ್ತು ಕೆಎಸ್ಐಐಡಿಸಿಯಿಂದ ರು. 50 ಕೋಟಿ ಸಾಲ ಪಡೆದಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.